
ಮೈಸೂರು: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಸೆಸ್ಕ್) ಜಾಗೃತ ದಳದ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿದ್ದವರ ವಿರುದ್ಧ 31 ಪ್ರಕರಣ ದಾಖಲಿಸಿ, ₹ 2.17 ಲಕ್ಷ ದಂಡ ವಿಧಿಸಿದ್ದಾರೆ.
ಸೆಸ್ಕ್ ವ್ಯಾಪ್ತಿಯ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳ ಜಾಗೃತದಳದ ವ್ಯಾಪ್ತಿಯ ಅಧಿಕಾರಿ ಮತ್ತು ಸಿಬ್ಬಂದಿ 8 ತಂಡಗಳಾಗಿ, ಮೈಸೂರು ಜಿಲ್ಲೆ ವ್ಯಾಪ್ತಿಯಲ್ಲಿರುವ ಏಕಲವ್ಯನಗರ, ಬಂಬೂಬಜಾರ್, ಇಟ್ಟಿಗೆಗೂಡು ಹಾಗೂ ಇತರೆ ವ್ಯಾಪ್ತಿಯಲ್ಲಿರುವ ವಿವಿಧ ಸ್ಥಾವರಗಳ ವ್ಯಾಪ್ತಿಯಲ್ಲಿ ಕಾರ್ಯಾಚರಣೆ ನಡೆಸಿದರು.
ನಿಗಮದ ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್ ರಾಜು, ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್, ಮುಖ್ಯ ಪ್ರಧಾನ ವ್ಯವಸ್ಥಾಪಕರು (ತಾಂತ್ರಿಕ) ಶರಣಮ್ಮ ಎಸ್. ಜಂಗಿನ್ ಮಾರ್ಗದರ್ಶನದಲ್ಲಿ ಜಾಗೃತ ದಳದ ಎಸ್ಪಿ ಸವಿತಾ ಹೂಗಾರ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.