ಮೈಸೂರು: ‘ಬೆಳಕಿನ ಹಬ್ಬ ದೀಪಾವಳಿ ಹಬ್ಬದ ಕಾರಣದಿಂದ ಮೈಸೂರು– ಜೈಪುರಕ್ಕೆ ಹೆಚ್ಚುವರಿ ರೈಲು ಸಂಚಾರಕ್ಕೆ ಅವಕಾಶ ಮಾಡಿಕೊಡಬೇಕೆಂಬ ನನ್ನ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದೆ’ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ತಿಳಿಸಿದ್ದಾರೆ.
ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಮೈಸೂರಿನಿಂದ ರಾಜಸ್ಥಾನದ ಜೈಪುರಕ್ಕೆ ತೆರಳುವವರ ಸಂಖ್ಯೆ ಹೆಚ್ಚಿದೆ. ಜನದಟ್ಟಣೆ ನಿರ್ವಹಿಸಲು ಇದು ಸಹಕಾರಿಯಾಗಲಿದೆ. ಪ್ರಯಾಣಿಕರು ಈ ಸೌಲಭ್ಯ ಬಳಸಿಕೊಳ್ಳಬಹುದು’ ಎಂದು ಕೋರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.