ADVERTISEMENT

ಮೈಸೂರು | ಪುಸ್ತಕದ ಸ್ನೇಹ: ವಿದ್ಯಾರ್ಥಿಗಳಿಗೆ ಮಂಟೇಲಿಂಗು ಸಲಹೆ

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2026, 6:13 IST
Last Updated 27 ಫೆಬ್ರುವರಿ 2026, 6:13 IST
ಜೆಎಸ್‌ಎಸ್ ಮಹಿಳಾ ಕಾಲೇಜಿನ ಗ್ರಂಥಾಲಯದಲ್ಲಿ ನವಕರ್ನಾಟಕ ಪ್ರಕಾಶನ ಹಮ್ಮಿಕೊಂಡಿರುವ ಪುಸ್ತಕ ಪ್ರದರ್ಶನವನ್ನು ಮೈಸೂರು ವಿ.ವಿ. ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕೆ.ಮಂಟೇಲಿಂಗು ಉದ್ಘಾಟಿಸಿದರು
ಜೆಎಸ್‌ಎಸ್ ಮಹಿಳಾ ಕಾಲೇಜಿನ ಗ್ರಂಥಾಲಯದಲ್ಲಿ ನವಕರ್ನಾಟಕ ಪ್ರಕಾಶನ ಹಮ್ಮಿಕೊಂಡಿರುವ ಪುಸ್ತಕ ಪ್ರದರ್ಶನವನ್ನು ಮೈಸೂರು ವಿ.ವಿ. ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕೆ.ಮಂಟೇಲಿಂಗು ಉದ್ಘಾಟಿಸಿದರು   

ಮೈಸೂರು: ‘ವಿದ್ಯಾರ್ಥಿಗಳು ಪುಸ್ತಕಗಳನ್ನೇ ಸ್ನೇಹಿತರನ್ನಾಗಿ ಮಾಡಿಕೊಳ್ಳಬೇಕು’ ಎಂದು ಮೈಸೂರು ವಿಶ್ವವಿದ್ಯಾಲಯದ ಕಾಲೇಜು ಅಭಿವೃದ್ಧಿ ಮಂಡಳಿಯ ನಿರ್ದೇಶಕ ಕೆ.ಮಂಟೇಲಿಂಗು ಸಲಹೆ ನೀಡಿದರು.

ಇಲ್ಲಿನ ಜೆಎಸ್‌ಎಸ್ ಮಹಿಳಾ ಕಾಲೇಜಿನ ಗ್ರಂಥಾಲಯದಲ್ಲಿ ನವಕರ್ನಾಟಕ ಪ್ರಕಾಶನದಿಂದ ಮೂರು ದಿನಗಳವರೆಗೆ ಹಮ್ಮಿಕೊಂಡಿರುವ ಪುಸ್ತಕ ಪ್ರದರ್ಶನವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಹೆಚ್ಚು ಹೆಚ್ಚು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು. ಈ ಮೂಲಕ ಜ್ಞಾನ ಮತ್ತು ಕಲ್ಪನೆಯ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳಬೇಕು. ಓದಿಗೆ ಸಮಾನವಾದುದು ಯಾವುದೂ ಇಲ್ಲ’ ಎಂದು ತಿಳಿಸಿದರು.

ADVERTISEMENT

ಅಧ್ಯಕ್ಷತೆ ವಹಿಸಿದ್ದ ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜು ಶಿಕ್ಷಣ ವಿಭಾಗದ ಉಪನಿರ್ದೇಶಕ ಬಿ.ನಿರಂಜನಮೂರ್ತಿ, ಪ್ರಾಂಶುಪಾಲ ರೇಚಣ್ಣ ಮಾತನಾಡಿದರು.

ಗ್ರಂಥಪಾಲಕ ಮಂಜುನಾಥ್ ಎಚ್‌.ಎನ್. ನಿರ್ವಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.