
ಸಾಂದರ್ಭಿಕ ಚಿತ್ರ
ಮೈಸೂರು: ಜಿಲ್ಲೆಯ ತಿ.ನರಸೀಪುರದ ರೇಷ್ಮೆ ನೂಲು ತೆಗೆಯುವ ಕಾರ್ಖಾನೆಯ ಆವರಣದಲ್ಲಿ ಕ್ರೀಡಾಂಗಣ ನಿರ್ಮಿಸಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆಗೆ ಇಲ್ಲಿನ ಮಾನಂದವಾಡಿ ರಸ್ತೆಯಲ್ಲಿರುವ ಕೆಎಸ್‌ಐಸಿ ಕಾರ್ಖಾನೆಯ ನೌಕರರೂ ಬೆಂಬಲ ನೀಡಿದ್ದು, ಗುರುವಾರ ತಮ್ಮ ಕೆಲಸಕ್ಕೆ ಗೈರಾಗಿದ್ದರು.
ನೌಕರರಿಲ್ಲದೆ ಗುರುವಾರ ಮೈಸೂರು ರೇಷ್ಮೆ ಕಾರ್ಖಾನೆಯಲ್ಲಿ ಬಹುತೇಕ ಕೆಲಸ ಸ್ಥಗಿತಗೊಂಡಿದ್ದು, ಇದು ಮೈಸೂರು ರೇಷ್ಮೆ ಸೀರೆ ಉತ್ಪಾದನೆ ಮೇಲೆಯೂ ಪರಿಣಾಮ ಬೀರಿದೆ. ಶುಕ್ರವಾರವೂ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದು, ಉತ್ಪಾದನೆ ವ್ಯತ್ಯಯ ಆಗುವ ಸಾಧ್ಯತೆ ಇದೆ.
ಕಾರ್ಖಾನೆಯ 192 ನೌಕರರು ಕಳೆದ ಶನಿವಾರದಿಂದ ಪ್ರತಿಭಟನೆ ಆರಂಭಿಸಿದ್ದಾರೆ. ಇದರಿಂದ ಮೈಸೂರು ಹಾಗೂ ಚನ್ನಪಟ್ಟಣದಲ್ಲಿರುವ ರೇಷ್ಮೆ ಸೀರೆ ನೇಯ್ಗೆ ಕಾರ್ಖಾನೆಗಳಿಗೆ ನೂಲು ಪೂರೈಕೆಯು ಸ್ಥಗಿತಗೊಂಡಿದೆ. ಈ ಕುರಿತು ಪ್ರತಿಕ್ರಿಯೆಗೆ ಕಾರ್ಖಾನೆಯ ಅಧಿಕಾರಿಗಳು ದೂರವಾಣಿ ಸಂಪರ್ಕಕ್ಕೆ ಲಭ್ಯರಾಗಲಿಲ್ಲ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.