ADVERTISEMENT

ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರ ಪ್ರವಾಸ 10ರಿಂದ

​ಪ್ರಜಾವಾಣಿ ವಾರ್ತೆ
Published 9 ಜನವರಿ 2026, 12:24 IST
Last Updated 9 ಜನವರಿ 2026, 12:24 IST
<div class="paragraphs"><p>ಎಚ್‌.ಸಿ. ಮಹದೇವಪ್ಪ&nbsp;</p></div>

ಎಚ್‌.ಸಿ. ಮಹದೇವಪ್ಪ 

   

ಮೈಸೂರು: ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್‌.ಸಿ. ಮಹದೇವಪ್ಪ ಅವರು ಜ.10ರಿಂದ (ಶನಿವಾರ) ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಶನಿವಾರ ಸಂಜೆ ಬೆಂಗಳೂರಿನಿಂದ ಬಂದು ವಾಸ್ತವ್ಯ ಹೂಡುವ ಅವರು, 11ರಂದು ಬೆಳಿಗ್ಗೆಯಿಂದ ಸಂಜೆಯವರೆಗೆ ಸ್ಥಳೀಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು. ಸಂಜೆ 6.30ಕ್ಕೆ ಕುವೆಂಪುನಗರದ ವಿವೇಕಾನಂದ ಕ್ರೀಡಾಂಗಣದಲ್ಲಿ ನಡೆಯಲಿರುವ ಪುರುಷರ ಕೊಕ್ಕೊ ರಾಜ್ಯಮಟ್ಟದ ಟೂರ್ನಿಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.

ADVERTISEMENT

ಜ.12ರಂದು ಬೆಳಿಗ್ಗೆ 10.30ಕ್ಕೆ ಮೈಸೂರು–ಬೆಂಗಳೂರು ರಸ್ತೆಯ ಶ್ರೀಕ್ಷೇತ್ರ ಗ್ರಾಮೀಣಾಭಿವೃದ್ಧಿ ಮಾನವ ಸಂಪನ್ಮೂಲ ತರಬೇತಿ ಕೇಂದ್ರದಲ್ಲಿ ಆಯೋಜಿಸಿರುವ ರಾಜ್ಯಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಸಹಪಠ್ಯ ಚಟುವಟಿಕೆಗಳ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ಸಂಜೆ 5.30ಕ್ಕೆ ರಂಗಾಯಣದಲ್ಲಿ ಬಹುರೂಪಿ ರಾಷ್ಟ್ರೀಯ ನಾಟಕೋತ್ಸವ ಉದ್ಘಾಟಿಸುವರು. 13ರಂದು ಮಧ್ಯಾಹ್ನ 12ರ ಸುಮಾರಿಗೆ ಬೆಂಗಳೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.