ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು
ಮೈಸೂರು: ಇಲ್ಲಿನ ವಸ್ತುಪ್ರದರ್ಶನ ಮೈದಾನದ ಬಳಿ ದುಷ್ಕರ್ಮಿಗಳು ಹಾಡಹಗಲೇ ವ್ಯಕ್ತಿಯೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಕೊಲೆಯಾದ ವ್ಯಕ್ತಿ ಕ್ಯಾತಮಾರನಹಳ್ಳಿ ವೆಂಕಟೇಶ್ ಎನ್ನಲಾಗಿದೆ. ದೊಡ್ಡಕೆರೆ ಮೈದಾನದ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ, ಆಟೊ ಹಾಗೂ ದ್ವಿಚಕ್ರ ವಾಹನದಲ್ಲಿ ಬಂದ ದುರ್ಷ್ಕರ್ಮಿಗಳ ತಂಡ ಮಾರಣಾಂತಿಕವಾಗಿ ದಾಳಿ ನಡೆಸಿ ಪರಾರಿಯಾಗಿದೆ.
ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. 'ಕೊಲೆಗೆ ಹಳೆ ವೈಷಮ್ಯ ಕಾರಣವೆಂದು ಮೇಲ್ನೋಟಕ್ಕೆ ಕಂಡು ಬಂದಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.