ADVERTISEMENT

ನಂಜನಗೂಡು | ವಿದ್ಯುತ್ ಸ್ಪರ್ಶ: ಯುವಕ ಸಾವು

​ಪ್ರಜಾವಾಣಿ ವಾರ್ತೆ
Published 27 ಜುಲೈ 2024, 15:38 IST
Last Updated 27 ಜುಲೈ 2024, 15:38 IST
<div class="paragraphs"><p>ಸಾಂಕೇತಿಕ ಚಿತ್ರ</p></div>

ಸಾಂಕೇತಿಕ ಚಿತ್ರ

   

ನಂಜನಗೂಡು: ತಾಲ್ಲೂಕಿನ ಹೆಗ್ಗಡಹಳ್ಳಿಯಲ್ಲಿ ಶುಕ್ರವಾರ ಆಕಸ್ಮಿಕವಾಗಿ ವಿದ್ಯುತ್ ತಗುಲಿ ಗ್ರಾಮದ ಶಿವಕುಮಾರ್ ಎಂಬುವವರ ಮಗ ಯಶವಂತ್ (16) ಸ್ಥಳದಲ್ಲಿಯೇ ಮೃತಪಟ್ಟರು.

ಶುಕ್ರವಾರ ರಾತ್ರಿ ಟಿ.ವಿ ಸ್ವಿಚ್ ಆನ್ ಮಾಡಲು ಹೋಗಿ ವಿದ್ಯುತ್ ಶಾಕ್‌ನಿಂದ ಯಶವಂತ್ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ADVERTISEMENT

ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಪಿಎಸ್ಐ ರಾಮಕುಮಾರ್ ಭೇಟಿ ನೀಡಿ ಮಹಜರು ನಡೆಸಿದರು.

ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.