ನಂಜನಗೂಡು: ತಾಲ್ಲೂಕಿನ ದೇವರಾಯಶೆಟ್ಟಿಪುರದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರ ಚುನಾವಣೆ ಭಾನುವಾರ ನಡೆಯಿತು.
ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕೀರ್ತಿ, ಶಿವನಾಗಪ್ಪ, ಕೆಂಪಣ್ಣ, ಜ್ಯೋತಿ, ಮಹದೇವಸ್ವಾಮಿ, ಶಿವಪ್ರಸಾದ್, ಮಹೇಶ್, ರಮೇಶ್, ಹೇಮಾ, ಮಂಜುಳಾ, ನಾಗಮ್ಮ, ಕುಮಾರ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರಸಾದ್ ಘೋಷಿಸಿದರು.
ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಬಿ.ಟಿ. ಕುಮಾರ್, ಸದಸ್ಯ ಜಗದೀಶ್, ಸಿದ್ದರಾಜು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.