
ಪ್ರಜಾವಾಣಿ ವಾರ್ತೆಮೈಸೂರು: ಅಂಬಾವಿಲಾಸ ಅರಮನೆ ಮುಂಭಾಗದ ಜಯಮಾರ್ತಾಂಡ ದ್ವಾರದ ಬಳಿ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಒಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರಿಗೆ ಗಾಯಗಳಾಗಿವೆ.
ಬೆಂಗಳೂರಿನ ಕಾಮಾಕ್ಷಿ ಪಾಳ್ಯದ ಲಕ್ಷ್ಮಿ, ನಂಜನಗೂಡಿನ ಮಂಜುಳಾ, ಕಲ್ಕತಾದ ಶಮಿನಾ ಶಬಿಲ್, ರಾಣಿ ಬೆನ್ನೂರಿನ ಕೊಟ್ರೇಶ್ ಅವರಿಗೆ ಗಾಯವಾಗಿದ್ದು, ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ
'ವ್ಯಕ್ತಿಯೊಬ್ಬ ಸೈಕಲ್‌ನಲ್ಲಿ ಹೀಲಿಯಂ ಬಲೂನ್ ಮಾರುತ್ತಿದ್ದಾಗ ರಾತ್ರಿ 8.30ಕ್ಕೆ ಸಿಲಿಂಡರ್ ಸ್ಫೋಟವಾಗಿದ್ದು, ಬಲೂನ್ ಮಾರುತ್ತಿದ್ದ ವ್ಯಕ್ತಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ' ಎಂದು ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್ ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.