ADVERTISEMENT

ಮೈಸೂರು | ರಾಜಮನೆತನದವರ ಪೂಜೆ: ಅರಮನೆಗೆ ನಿರ್ಬಂಧ

​ಪ್ರಜಾವಾಣಿ ವಾರ್ತೆ
Published 12 ಸೆಪ್ಟೆಂಬರ್ 2025, 11:53 IST
Last Updated 12 ಸೆಪ್ಟೆಂಬರ್ 2025, 11:53 IST
<div class="paragraphs"><p>ಮೈಸೂರು ಅರಮನೆ</p></div>

ಮೈಸೂರು ಅರಮನೆ

   

ಮೈಸೂರು: ಮೈಸೂರು ರಾಜಮನೆತನದವರು ಅರಮನೆಯಲ್ಲಿ ದಸರಾ ಅಂಗವಾಗಿ ಧಾರ್ಮಿಕ ಕೈಂಕರ್ಯಗಳನ್ನು ಕೈಗೊಳ್ಳುವುದರಿಂದ, ಆ ದಿನಗಳಲ್ಲಿ ಸಾರ್ವಜನಿಕರು ಮತ್ತು ಪ್ರವಾಸಿಗರಿಗೆ ವೀಕ್ಷಣೆಗೆ ಪ್ರವೇಶ ನಿರ್ಬಂಧಿಸಲಾಗಿದೆ.

ಸಿಂಹಾಸನ ಜೋಡಣೆ ಪ್ರಯುಕ್ತ ಸೆ.16ರಂದು ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ, ‘ಖಾಸಗಿ ದರ್ಬಾರ್‌’ನಲ್ಲಿ ರಾಜವಂಶಸ್ಥರ ಪೂಜಾ ಕೈಂಕರ್ಯದ ಪ್ರಯುಕ್ತ ಸೆ.22ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಪ್ರವೇಶ ಇರುವುದಿಲ್ಲ.

ADVERTISEMENT

ಅ.1ರಂದು ಆಯುಧಪೂಜೆ ‌ಅಂಗವಾಗಿ ಸಂಪೂರ್ಣ ದಿನ ಪ್ರವೇಶ ಇರುವುದಿಲ್ಲ. ಅ.2ರಂದು ದಸರಾ ಪಾಸ್, ಟಿಕೆಟ್‌ ಪಡೆದವರಿಗೆ ಮಾತ್ರವೇ ಪ್ರವೇಶ ಇರಲಿದೆ. ಅ.31ರಂದು ಸಿಂಹಾಸನ ವಿಸರ್ಜನೆ ಪ್ರಯುಕ್ತ ಬೆಳಿಗ್ಗೆ 10ರಿಂದ 12ರವರೆಗೆ ಪ್ರವೇಶ ನೀಡಲಾಗುವುದಿಲ್ಲ ಎಂದು ಮೈಸೂರು ಅರಮನೆ ಮಂಡಳಿ ಕಾರ್ಯನಿರ್ವಾಹಕ ಅಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ದಸರಾ ಅಂಗವಾಗಿ ಸೆ.15ರಿಂದ ಅ.12ರವರೆಗೆ ಧ್ವನಿ ಮತ್ತು ಬೆಳಕು ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ರದ್ದುಪಡಿಸಲಾಗಿದೆ. ಅ.13ರಿಂದ ಎಂದಿನಂತೆ ಕಾರ್ಯಕ್ರಮವನ್ನು ಸಂಜೆ 7ರಿಂದ 8ರವರೆಗೆ ನಡೆಯಲಿದೆ ಎಂದು ಉಪ ನಿರ್ದೇಶಕ ಟಿ.ಎಸ್. ಸುಬ್ರಹ್ಮಣ್ಯ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.