ಗರ್ಭಿಣಿ
(ಐಸ್ಟೋಕ್ ಪ್ರಾತಿನಿಧಿಕ ಚಿತ್ರ)
ಹುಣಸೂರು (ಮೈಸೂರು ಜಿಲ್ಲೆ): ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪೋಕ್ಸೊ ಪ್ರಕರಣಗಳು ದಾಖಲಾಗಿದ್ದು, ಇಬ್ಬರು ಬಾಲಗರ್ಭಿಣಿಯರನ್ನು ಮೈಸೂರಿನ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
‘ತಾಲ್ಲೂಕಿನ ನಾಗಾಪುರ ಪುನರ್ವಸತಿ ಕೇಂದ್ರದಲ್ಲಿ ಗರ್ಭಿಣಿ ಬಾಲಕಿ ಪತ್ತೆಯಾಗಿರುವ ಬಗ್ಗೆ ಸಾರ್ವಜನಿಕರು ನೀಡಿದ ಮಾಹಿತಿ ಆಧರಿಸಿ, ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ಬಾಲಕಿಯನ್ನು ರಕ್ಷಿಸಲಾಗಿದೆ’ ಎಂದು ಶಿಶು ಮತ್ತು ಮಕ್ಕಳ ಇಲಾಖೆ ಅಧಿಕಾರಿ ಹರೀಶ್ ತಿಳಿಸಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಎಚ್.ಡಿ.ಕೋಟೆ ತಾಲ್ಲೂಕಿನ ಹಾಡಿಯೊಂದರ ಬಾಲಕಿಯು ತಾಲ್ಲೂಕಿನ ದೊಡ್ಡಹೆಜ್ಜೂರಿನ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಬಂದಾಗ ಗರ್ಭಿಣಿಯಾಗಿರುವುದು ಗೊತ್ತಾಗಿ ವೈದ್ಯರು ಮಾಹಿತಿ ನೀಡಿದ್ದರು. ‘ಪ್ರಕರಣಗಳಿಗೆ ಸಂಬಂಧಿಸಿ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆರೋಪಿಗಳ ಬಂಧನಕ್ಕೆ ಕ್ರಮವಹಿಸಲಾಗಿದೆ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.