ADVERTISEMENT

ಕೊನೆ ಕ್ಷಣದ ಟ್ವಿಸ್ಟ್: ಮೈಸೂರು ಪಾಲಿಕೆಯಲ್ಲಿ ಮತ್ತೆ ಜೆಡಿಎಸ್-ಕಾಂಗ್ರೆಸ್ ದೋಸ್ತಿ

ರುಕ್ಮಿಣಿ ಮಾದೇಗೌಡ ನೂತನ ಮೇಯರ್, ಕಾಂಗ್ರೆಸ್ ಸದಸ್ಯ ಅನ್ವರ್ ಬೇಗ್ ಉಪಮೇಯರ್

​ಪ್ರಜಾವಾಣಿ ವಾರ್ತೆ
Published 24 ಫೆಬ್ರುವರಿ 2021, 7:45 IST
Last Updated 24 ಫೆಬ್ರುವರಿ 2021, 7:45 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಮೈಸೂರು:ತೀವ್ರ ಕುತೂಹಲ ಕೆರಳಿಸಿದ್ದ ಮೈಸೂರು ಮಹಾನಗರ ಪಾಲಿಕೆಯ ಚುನಾವಣೆಯಲ್ಲಿ ಜಯ ಗಳಿಸಿ 23ನೇ ಮೇಯರ್ ಆಗಿ ಜೆಡಿಎಸ್ ಸದಸ್ಯೆ ರುಕ್ಮಿಣಿ ಮಾದೇಗೌಡ ಆಯ್ಕೆಯಾಗಿದ್ದಾರೆ. ಇವರು 36ನೇ ವಾರ್ಡ್‌ನ ಸದಸ್ಯೆ. ಉಪಮೇಯರ್ ಆಗಿ 10 ನೇ ವಾರ್ಡ್‌ನ ಕಾಂಗ್ರೆಸ್ ಸದಸ್ಯ ಅನ್ವರ್ ಬೇಗ್ (ಅಫ್ತಾಬ್) ಆಯ್ಕೆಯಾಗಿದ್ದಾರೆ.

ಕಾಂಗ್ರೆಸ್ ಬೆಂಬಲದಿಂದ ಜೆಡಿಎಸ್ ನ ರುಕ್ಮಿಣಿ ಮಾದೇಗೌಡ ಮೇಯರ್ ಆದರೆ, ಜೆಡಿಎಸ್ ಬೆಂಬಲದಿಂದ ಕಾಂಗ್ರೆಸ್ ಪಕ್ಷದ ಅನ್ವರ್ ಬೇಗ್ ( ಅಫ್ತಾಬ್) ಉಪಮೇಯರ್ ಆಗಿ ಆಯ್ಕೆಯಾಗಿದ್ದಾರೆ.

ಮೇಯರ್ ಚುನಾವಣೆ ಮಹಾನಗರ ಪಾಲಿಕೆ ಕೌನ್ಸಿಲ್ ಸಭಾಂಗಣದಲ್ಲಿ ಬುಧವಾರ ಪ್ರಾದೇಶಿಕ ಆಯುಕ್ತ ಪ್ರಕಾಶ್ ನೇತೃತ್ವದಲ್ಲಿ ಪಾಲಿಕೆ ಆಯುಕ್ತೆ ಶಿಲ್ಪಾನಾಗ್ ನಡೆಸಿದರು.

ರುಕ್ಮಿಣಿ ಮಾದೇಗೌಡ

ಬೆಳಿಗ್ಗೆ ಚುನಾವಣೆ ಪ್ರಕ್ರಿಯೆ ಆರಂಭವಾಗುತ್ತಿದ್ದಂತೆ ಬಿಜೆಪಿಯ ಸುನಂದಾ ಪಾಲನೇತ್ರ ನಾಮಪತ್ರ ಸಲ್ಲಿಸಿದರು. ಕಾಂಗ್ರೆಸ್ ನಿಂದ ಶಾಂತಕುಮಾರಿ, ಜೆಡಿಎಸ್‌ನಿಂದ ರುಕ್ಮಿಣಿ ಮಾದೇಗೌಡ ನಾಮಪತ್ರ ಸಲ್ಲಿಸಿದರು.

ಒಟ್ಟು 73 ಸದಸ್ಯರ ಬಲ ಹೊಂದಿರುವ ಪಾಲಿಕೆಯಲ್ಲಿ ಅಂತಿಮವಾಗಿ ರುಕ್ಮಿಣಿ ಮಾದೇಗೌಡ ಪರ 43 ಮತಗಳು ಲಭಿಸಿದರೆ, ಬಿಜೆಪಿಯ ಸುನಂದಾ ಪಾಲನೇತ್ರ 26 ಮತಗಳನ್ನು ಪಡೆದರು, ಕಾಂಗ್ರೆಸ್‌ನ ಶಾಂತಕುಮಾರಿ ಪರ ಯಾರೂ ಮತ ಚಲಾಯಿಸಲಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.