ಮೈಸೂರು ದಸರಾ ಅಂಗವಾಗಿ ಅಂಬಾವಿಲಾಸ ಅರಮನೆ ಆವರಣದಲ್ಲಿ ಸಿದ್ಧತಾ ಕಾರ್ಯಗಳು ನಡೆದಿವೆ
ಪ್ರಜಾವಾಣಿ ಚಿತ್ರ/ಅನೂಪ್ ರಾಘ.ಟಿ.
ಮೈಸೂರು: ದಸರಾ ಅಂಗವಾಗಿ ಮೈಸೂರು ರಾಜವಂಶಸ್ಥರು ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯಗಳನ್ನು ಕೈಗೊಳ್ಳುವುದರಿಂದಾಗಿ, ನಿಗದಿತ ದಿನಗಳಲ್ಲಿ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ.9ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಸಿಂಹಾಸನ ಜೋಡಣೆ ಕಾರ್ಯಕ್ರಮದ ಪ್ರಯುಕ್ತ ಪ್ರವೇಶವಿರುವುದಿಲ್ಲ.
ಅ.15ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ರಾಜವಂಶಸ್ಥರು ನಡೆಸುವ ಖಾಸಗಿ ದರ್ಬಾರ್, ಅ.23ರಂದು ಆಯುಧಪೂಜೆ ಪ್ರಯುಕ್ತ ಬೆಳಿಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಲಾಗಿದೆ.
ಅ.24ರಂದು ವಿಜಯದಶಮಿಯ ಅಂಗವಾಗಿ ಇಡೀ ದಿನ ಪ್ರವೇಶವಿರುವುದಿಲ್ಲ. ಸಿಂಹಾಸನ ವಿಸರ್ಜನೆ ಅಂಗವಾಗಿ ನ.8ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 1ರವರೆಗೆ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅರಮನೆ ಮಂಡಳಿ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.