ADVERTISEMENT

ಮೈಸೂರು: ಎಸ್‌ಪಿ, ಡಿಸಿಪಿ ಅಧಿಕಾರ ಸ್ವೀಕಾರ

​ಪ್ರಜಾವಾಣಿ ವಾರ್ತೆ
Published 10 ಜೂನ್ 2021, 16:34 IST
Last Updated 10 ಜೂನ್ 2021, 16:34 IST
ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರನ್ನು ಗುರುವಾರ ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು
ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರನ್ನು ಗುರುವಾರ ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು   

ಮೈಸೂರು: ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಚೇತನ್ ಅವರು ಗುರುವಾರ ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ.ರಿಷ್ಯಂತ್ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತ ಕೋರಿದರು.

2010ರ ಐಪಿಎಸ್‌ ಶ್ರೇಣಿಯ ಅಧಿಕಾರಿಯಾದ ಆರ್.ಚೇತನ್ ಅವರು ಈ ಹಿಂದೆ ದಾವಣಗೆರೆ, ಬಳ್ಳಾರಿ ಹಾಗೂ ಚಿಕ್ಕಮಗಳೂರು ಜಿಲ್ಲೆ ಹಾಗೂಉಡುಪಿ ಕರಾವಳಿ ಕಾವಲು ಪೊಲೀಸ್‌ ಪಡೆಯ ಎಸ್‌.ಪಿಯಾಗಿ ಕಾರ್ಯನಿರ್ವಹಿಸಿದ್ದರು.

ನಗರ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿಯಾಗಿ ಪ್ರದೀಪ್‌ಗುಂಟಿ ಅವರು ನಿರ್ಗಮಿತ ಅಧಿಕಾರಿ ಡಾ.ಎ.ಎನ್.ಪ್ರಕಾಶ್‌ಗೌಡ ಅವರಿಂದ ಅಧಿಕಾರ ಸ್ವೀಕರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.