ADVERTISEMENT

Caste Census | ಮೈಸೂರು: ಸಿಎಂ ತವರಲ್ಲಿ ಸಮೀಕ್ಷೆಗೆ ವಿದ್ಯಾರ್ಥಿಗಳ ಬಳಕೆ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2025, 19:47 IST
Last Updated 5 ಅಕ್ಟೋಬರ್ 2025, 19:47 IST
   

ಮೈಸೂರು: ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಸಮೀಕ್ಷೆ ಕಾರ್ಯಕ್ಕೆ ಕಾಲೇಜು ವಿದ್ಯಾರ್ಥಿಗಳನ್ನು ಬಳಸಿಕೊಳ್ಳುತ್ತಿರುವ ಆರೋಪ ಕೇಳಿಬಂದಿದೆ.

ನಗರದ ದೇವರಾಜ ಅರಸು ರಸ್ತೆ ಸಮೀಪದ ಮನೆಗಳಲ್ಲಿ ಸಮೀಕ್ಷೆಗೆ ಬಂದಿದ್ದ ವಿದ್ಯಾರ್ಥಿಗಳನ್ನು ಸ್ಥಳೀಯರು ಪ್ರಶ್ನಿಸಿದ್ದು, ಸಂಬಂಧಿಸಿದ ಸಿಬ್ಬಂದಿಯನ್ನೂ ತರಾಟೆಗೆ ತೆಗೆದುಕೊಂಡಿದ್ದಾರೆ. ಘಟನೆಯನ್ನು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲೂ ಹರಿಬಿಟ್ಟಿದ್ದಾರೆ.

‘ಸಮೀಕ್ಷೆಗೆಂದು ಬಂದ ವಿದ್ಯಾರ್ಥಿಗಳ ಮೊಬೈಲ್‌ ಫೋನ್‌ನಲ್ಲಿ ಸಮೀಕ್ಷೆ ಆ್ಯಪ್‌ ಇತ್ತು. ವಿದ್ಯಾರ್ಥಿಗಳನ್ನು ಬಳಸಿಕೊಳ್ಳುವುದು ಮತ್ತು ಅವರಿಗೆ ಸರ್ಕಾರದ ಆ್ಯಪ್‌ ನೀಡುವುದು ಸರಿಯಲ್ಲ. ಇದು ಸಮೀಕ್ಷೆಯ ಕಾರ್ಯವೈಖರಿಯನ್ನೇ ಪ್ರಶ್ನಿಸುವಂತಿದೆ’ ಎಂಬುದು ಸ್ಥಳೀಯರ ಆರೋಪ.

ADVERTISEMENT

‘ಕೆಲ ಶಿಕ್ಷಕರಿಗೆ ಆ್ಯಪ್‌ ಬಳಕೆ ಗೊತ್ತಿಲ್ಲ. ಅಂಥವರು ವಿದ್ಯಾರ್ಥಿಗಳ ನೆರವು ಪಡೆಯುತ್ತಿದ್ದಾರೆ. ಸಮೀಕ್ಷೆಯನ್ನು ಆದಷ್ಟು ಬೇಗ ಮುಗಿಸುವ ದಾವಂತದಲ್ಲಿ ಇರುವವರೂ ವಿದ್ಯಾರ್ಥಿಗಳ ಬಳಕೆ ಮಾಡಿಕೊಳ್ಳುತ್ತಿದ್ದಾರೆ’ ಎಂದು ಸಮೀಕ್ಷೆಯಲ್ಲಿ ಪಾಲ್ಗೊಂಡ ಶಿಕ್ಷಕರೊಬ್ಬರು ಮಾಹಿತಿ ನೀಡಿದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.