ಸಾಮಾಜಿಕ ಜಾಲತಾಣ
ರಾಯಿಟರ್ಸ್ ಚಿತ್ರ
ಮೈಸೂರು: ಮದುವೆಯಾಗಲು ನಿರಾಕರಿಸಿದ್ದಕ್ಕೆ ಯುವತಿಯ ಖಾಸಗಿ ವಿಡಿಯೊ ಇಟ್ಟುಕೊಂಡು ಬೆದರಿಸಿದ ತೇಜಸ್ ಎಂಬಾತನ ವಿರುದ್ಧ ನರಸಿಂಹರಾಜ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ಹಲವು ವರ್ಷಗಳಿಂದ ನಾನು ತೇಜಸ್‌ನನ್ನು ಪ್ರೀತಿಸುತ್ತಿದ್ದು, ಈಚೆಗೆ ಆತನ ವರ್ತನೆಯಿಂದ ದೂರವಾಗಿದ್ದೆ. ಆತ ನನ್ನನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದಲ್ಲದೇ ಮನೆಗೆ ನುಗ್ಗಿ ಗಲಾಟೆ ಮಾಡಿದ್ದ. ನನ್ನ ಖಾಸಗಿ ವಿಡಿಯೊ ಇಟ್ಟುಕೊಂಡು ಬೆದರಿಕೆ ಹಾಕುತ್ತಿದ್ದು, ಮದುವೆಯಾಗದೇ ಇದ್ದರೆ ಸಾಮಾಜಿಕ ಜಾಲತಾಣದಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ’ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.