ದಂಡ (ಸಾಂದರ್ಭಿಕ ಚಿತ್ರ)
– ಐಸ್ಟಾಕ್ ಚಿತ್ರ
ಮೈಸೂರು: ಸಂಚಾರ ನಿಯಮ ಉಲ್ಲಂಘನೆ ಕುರಿತ ದಂಡ ಪಾವತಿಗೆ ರಾಜ್ಯ ಸರ್ಕಾರ ಶೇ 50ರಷ್ಟು ರಿಯಾಯಿತಿ ನೀಡಿದ್ದ 21 ದಿನಗಳ ಅವಧಿಯಲ್ಲಿ ಮೈಸೂರು ಜಿಲ್ಲಾ ಪೊಲೀಸ್ ವ್ಯಾಪ್ತಿಯಲ್ಲಿ 55,269 ಪ್ರಕರಣಗಳು ಇತ್ಯರ್ಥಗೊಂಡು, ₹1,39,14,250 ದಂಡ ಸಂಗ್ರಹಿಸಲಾಗಿದೆ.
ಪೊಲೀಸ್ ಇಲಾಖೆಯಲ್ಲಿ ಸಂಚಾರ ನಿಯಮ ಉಲ್ಲಂಘನೆ ಮಾಡಿ, ಈ ಚಲನ್ ಮೂಲಕ ದಾಖಲಾಗಿರುವ ಪ್ರಕರಣಗಳ ಸಂಬಂಧ ಇಲ್ಲಿಯವರೆಗೆ ದಂಡವನ್ನು ಪಾವತಿಸದೆ ಬಾಕಿ ಉಳಿಸಿಕೊಂಡಿರುವ ಪ್ರಕರಣಗಳಲ್ಲಿ ದಂಡವನ್ನು ಪಾವತಿಸಲು ರಾಜ್ಯ ಸರ್ಕಾರವು ಶೇ 50 ರಿಯಾಯಿತಿ ನೀಡಿತ್ತು.
ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ದಂಡ ಪಾವತಿಸಲು ಶೇ 50 ರಿಯಾಯಿತಿ ನೀಡಿರುವ ಬಗ್ಗೆ ಜಿಲ್ಲಾ ಪೊಲೀಸ್ ವತಿಯಿಂದ ಟ್ವಿಟರ್, ಫೇಸ್‌ಬುಕ್, ಕೆ.ಎಸ್.ಪಿ.ಎಸ್ ಆ್ಯಪ್ ಮತ್ತು ಇತರೆ ಸಾಮಾಜಿಕ ಜಾಲತಾಣಗಳ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿದ್ದರು.
‘ಸಂಚಾರ ನಿಯಮ ಉಲ್ಲಂಘನೆ ಮಾಡಿದ್ದ ವಾಹನ ಸವಾರರು ಆ.23ರಿಂದ ಸೆ.12ರವರೆಗೆ 55,269 ಪ್ರಕರಣಗಳು ಇತ್ಯರ್ಥಗೊಂಡಿವೆ’ ಎಂದು ಎಎಸ್ಪಿ ಸಿ. ಮಲ್ಲಿಕ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.