ADVERTISEMENT

ಮೈಸೂರು | ಕಾರು ಅಡ್ಡಗಟ್ಟಿ ವ್ಯಕ್ತಿಯ ಕೊಲೆ: ಐವರು ಆರೋಪಿಗಳು ಶರಣು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 5:38 IST
Last Updated 8 ಅಕ್ಟೋಬರ್ 2025, 5:38 IST
<div class="paragraphs"><p>ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು</p></div>

ಘಟನೆ ನಡೆದ ಸ್ಥಳದಲ್ಲಿ ಪೊಲೀಸರು ಪರಿಶೀಲನೆ ನಡೆಸಿದ್ದರು

   

–ಪ್ರಜಾವಾಣಿ ಚಿತ್ರ

ಮೈಸೂರು: ದೊಡ್ಡಕೆರೆ ಮೈದಾನದ ಬಳಿ ವೆಂಕಟೇಶ್‌ನನ್ನು ಬರ್ಬರವಾಗಿ ಕೊಲೆ ಮಾಡಿದ ಐವರು ಆರೋಪಿಗಳು ಮಂಗಳವಾರ ತಡರಾತ್ರಿ ಪೊಲೀಸರ ಮುಂದೆ ಶರಣಾಗಿದ್ದಾರೆ.

ADVERTISEMENT

ಮನೋಜ್ ಆಲಿಯಾಸ್ ಬಿಗ್ ಶೋ, ಮಲ್ಲಿಕಾರ್ಜುನ ಆಲಿಯಾಸ್ ಹಾಲಪ್ಪ ಸಹಿತ ಐವರು ಶರಣಾಗಿದ್ದಾರೆ ಎನ್ನಲಾಗಿದೆ. ಈಚೆಗೆ ನಡೆದ ಕಾರ್ತಿಕ್ ಕೊಲೆಯ ನಂತರ ನಡೆದ ವಿದ್ಯಮಾನಗಳು ಕೊಲೆಗೆ ಕಾರಣ ಎಂದು ಮೂಲಗಳು ತಿಳಿಸಿವೆ.

ದೊಡ್ಡಕೆರೆ ಮೈದಾನದ ಬಳಿ ವೆಂಕಟೇಶ್ ಮಂಗಳವಾರ ಬೆಳಿಗ್ಗೆ ಕಾರಿನಲ್ಲಿ ತೆರಳುತ್ತಿದ್ದಾಗ ಆರೋಪಿಗಳು ಆಟೊದಲ್ಲಿ ಅಡ್ಡಗಟ್ಟಿ, ಕಣ್ಣಿಗೆ ಕಾರದ ಪುಡಿ ಎರಚಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದರು.

ಸ್ಥಳಕ್ಕೆ ಭೇಟಿ ನೀಡಿದ್ದ ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುರಾಣಿ, ಕೆ.ಎಸ್.ಸುಂದರ್ ರಾಜ್ ಆರೋಪಿಗಳ ಪತ್ತೆಗೆ ನಾಲ್ಕು ತಂಡ ರಚಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.