ADVERTISEMENT

ಮೈಸೂರು | ಮಾನಸಿಕ ಕಿರುಕುಳ ನೀಡಿ ಪತ್ನಿಯ ಕೊಲೆ: ಪತಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 29 ಆಗಸ್ಟ್ 2025, 2:41 IST
Last Updated 29 ಆಗಸ್ಟ್ 2025, 2:41 IST
<div class="paragraphs"><p>ಜೈಲು (ಪ್ರಾತಿನಿಧಿಕ ಚಿತ್ರ)</p></div>

ಜೈಲು (ಪ್ರಾತಿನಿಧಿಕ ಚಿತ್ರ)

   

ಮೈಸೂರು: ಮಾನಸಿಕ ಕಿರುಕುಳ ನೀಡಿ ಪತ್ನಿ ಕೊಲೆ ಮಾಡಿದ್ದ ಪತಿಗೆ ಇಲ್ಲಿನ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ ₹ 5 ಸಾವಿರ ದಂಡ ವಿಧಿಸಿದೆ. 

ಪಿರಿಯಾಪಟ್ಟಣದ ತಾಲ್ಲೂಕಿನ ಬೂದಿತಿಟ್ಟು ಗ್ರಾಮದ ಸ್ವಾಮಿನಾಯಕ ಶಿಕ್ಷೆಗೊಳಗಾದವ. ಅಬ್ಬಳತಿ ಗ್ರಾಮದ ಸೌಮ್ಯಾ ಎಂಬುವರನ್ನು ಸ್ವಾಮಿ ನಾಯಕ 7 ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದು, 6 ವರ್ಷ ಸೌಮ್ಯಾ ಅವರ ಮನೆಯಲ್ಲಿ ವಾಸವಾಗಿದ್ದನು. ನಂತರ ಪತ್ನಿಯೊಂದಿಗೆ ತನ್ನೂರಿಗೆ ವಾಪಸಾಗಿದ್ದ.

ADVERTISEMENT

ಪತ್ನಿ ನಡತೆ ಮೇಲೆ ಅನುಮಾನ ಪಟ್ಟು ಆಗಾಗ್ಗೆ ಗಲಾಟೆ ಮಾಡಿ ಮಾನಸಿಕ ಹಿಂಸೆ ನೀಡುತ್ತಿದ್ದು, 2022ರ ಮೇ 9ರಂದು ಉಸಿರುಗಟ್ಟಿಸಿ ಕೊಲೆ ಮಾಡಿದ್ದನು. 

ಪ್ರಕರಣ ದಾಖಲಿಸಿಕೊಂಡ ಪಿರಿಯಾಪಟ್ಟಣ ಠಾಣೆ ಪೊಲೀಸರು, ಆರೋಪಿ ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಗುರುರಾಜ ಸೋಮಕ್ಕಳವರ್‌ ಈ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಬಿ.ಇ.ಯೋಗೇಶ್ವರ ವಾದ ಮಂಡಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.