
ಮೈಸೂರಿನ ಚಾಮರಾಜೇಂದ್ರ ಮೃಗಾಲಯ
ಮೈಸೂರು: ಇಲ್ಲಿನ ಚಾಮರಾಜೇಂದ್ರ ಮೃಗಾಲಯದಿಂದ 12ರಿಂದ 18 ವರ್ಷ ವಯಸ್ಸಿನ ವಿದ್ಯಾರ್ಥಿಗಳಿಗೆ ಬೇಸಿಗೆ ಶಿಬಿರ ಆಯೋಜಿಸಲು ನಿರ್ಧರಿಸಲಾಗಿದೆ.
ಏ.13ರಿಂದ 22ರವರೆಗೆ ಮೊದಲ ಬ್ಯಾಚ್ ಹಾಗೂ ಮೇ 11ರಿಂದ 20ರವರೆಗೆ 2ನೇ ಬ್ಯಾಚ್‌ನಲ್ಲಿ ಬೆಳಿಗ್ಗೆ 10ರಿಂದ ಸಂಜೆ 4ರವರೆಗೆ ನಡೆಯಲಿದೆ. ಮೃಗಾಲಯದಲ್ಲಿ ಪ್ರಾಣಿಗಳ ನಿರ್ವಹಣೆ, ಪ್ರಾಣಿಗಳ ನಡವಳಿಕೆ ಅಧ್ಯಯನ, ಕಾಡುಪ್ರಾಣಿಗಳ ಸಂರಕ್ಷಣೆ ಮೊದಲಾದ ವಿಷಯಗಳ ಕುರಿತು ಮಕ್ಕಳಿಗೆ ತಿಳಿಸುವುದು ಶಿಬಿರದ ಪ್ರಮುಖ ಉದ್ದೇಶವಾಗಿದೆ. ಮೃಗಾಲಯದ ಅಧಿಕಾರಿಗಳು ಹಾಗೂ ವಿಷಯ ತಜ್ಞರು ಶಿಬಿರಾರ್ಥಿಗಳೊಂದಿಗೆ ಸಂವಾದ ನಡೆಸುವರು.
ಆಸಕ್ತರು ಮಾರ್ಚ್ 5ರಿಂದ 10ರೊಳಗೆ ಮೃಗಾಲಯದ ಕಚೇರಿಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಮಾರ್ಚ್ 12ರೊಳಗೆ ಸಲ್ಲಿಸಬೇಕು. ಮೊದಲು ನೋಂದಾಯಿಸಿದ 60 ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಹೆಚ್ಚಿನ ಮಾಹಿತಿಗೆ www.mysuruzoo.info ವೀಕ್ಷಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.