ಮೈಸೂರು ಜಿಲ್ಲಾ ಹಾಪ್‌ಕಾಮ್ಸ್ ಉಪಾಧ್ಯಕ್ಷರಾಗಿ ಆಯ್ಕೆಯಾದ ಎಸ್.ಜಿ. ನಳಿನಿ ಅವರನ್ನು ಅಧ್ಯಕ್ಷ ಹೊಸಹುಂಡಿ ರಘು ಅಭಿನಂದಿಸಿದರು
ಮೈಸೂರು: ಎಸ್.ಜಿ.ನಳಿನಿ ಅವರು ಜಿಲ್ಲಾ ಹಾಪ್‌ಕಾಮ್ಸ್ (ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘ) ಉಪಾಧ್ಯಕ್ಷರಾಗಿ ಆಯ್ಕೆಯಾದರು.
ಅಧ್ಯಕ್ಷ ಹೊಸಹುಂಡಿ ರಘು ನೇತೃತ್ವದಲ್ಲಿ ಸೋಮವಾರ ನಡೆದ ಚುನಾವಣೆಯಲ್ಲಿ ನಳಿನಿ ಮಾತ್ರವೇ ನಾಮಪತ್ರ ಸಲ್ಲಿಸಿದ್ದರಿಂದ, ಅವಿರೋಧ ಆಯ್ಕೆ ಘೋಷಿಸಲಾಯಿತು.
ಈ ಹಿಂದೆ ಉಪಾಧ್ಯಕ್ಷರಾಗಿದ್ದ ಸರ್ವೇಶ್ ರಾಜೀನಾಮೆ ನೀಡಿದ್ದರಿಂದ ತೆರವಾಗಿದ್ದ ಸ್ಥಾನಕ್ಕೆ ಚುನಾವಣೆ ನಡೆಯಿತು. ಚುನಾವಣಾಧಿಕಾರಿಯಾಗಿ ಜಯಲಕ್ಷ್ಮಿ ಕಾರ್ಯನಿರ್ವಹಿಸಿದರು.
ಹಾಪ್‌ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕ ಇಂದುಧರ್, ರಾಜ್ಯ ತೋಟಗಾರಿಕಾ ಮಹಾಮಂಡಲದ ನಿರ್ದೇಶಕ ಸೂರ್ಯಕುಮಾರ್, ಮಾಜಿ ಅಧ್ಯಕ್ಷ ಬಿ.ಪಿ. ಬೋರೇಗೌಡ, ನಿರ್ದೇಶಕರಾದ ಪದ್ಮನಾಭ, ಚಂದ್ರೇಗೌಡ, ಶ್ರೀನಿವಾಸ್ ಕುಂಬ್ರಳ್ಳಿಮಠ, ಮಹಾದೇವ, ಮಹೇಂದ್ರ, ರಾಮೇಗೌಡ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.