ಮೈಸೂರು: ‘ಕನ್ನಡದ್ ಕನ್ನಡಿ’ ಸಂಸ್ಥೆಯಿಂದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ 141ನೇ ಜನ್ಮ ದಿನದ ಅಂಗವಾಗಿ ಹಮ್ಮಿಕೊಂಡಿರುವ ‘ನಾಲ್ವಡಿ ಪರ್ವ’ ಕಾರ್ಯಕ್ರಮಕ್ಕೆ ಭಾನುವಾರ ಚಾಲನೆ ನೀಡಲಾಯಿತು.
ಜೂನ್ 30ರವರೆಗೆ ಆಯೋಜಿಸಿರುವ ವಿವಿಧ ಕಾರ್ಯಕ್ರಮಗಳಿಗೆ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಇಲ್ಲಿನ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯ ದೇವಸ್ಥಾನದ ಆವರಣದಲ್ಲಿ ಚಾಲನೆ ನೀಡಿದರು.
ನಂತರ ಪಾರಂಪರಿಕ ನಡಿಗೆ ಕಾರ್ಯಕ್ರಮ ನಡೆಯಿತು. ಇತಿಹಾಸ ತಜ್ಞ ಎನ್.ಎಸ್. ರಂಗರಾಜು, ಕನ್ನಡದ್ ಕನ್ನಡಿ ಸಂಸ್ಥಾಪಕ ಗಣೇಶ್ ಪ್ರಸಾದ್ ಪಾಲ್ಗೊಂಡಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.