ಬನ್ನೂರು (ಮೈಸೂರು ಜಿಲ್ಲೆ): ನಟಿ ಹಾಗೂ ನಗರ ಕಾಂಗ್ರೆಸ್ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ವಿದ್ಯಾ ಅವರನ್ನು ಕೊಲೆ ಮಾಡಿ ಪರಾರಿಯಾಗಿದ್ದ ಪತಿ ನಂದೀಶ್‌ನನ್ನು ಪೊಲೀಸರು ಬುಧವಾರ ಸಂಜೆ ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ವಿದ್ಯಾ ಸೋಮವಾರ ತಡರಾತ್ರಿ ತಿ.ನರಸೀಪುರ ತಾಲ್ಲೂಕಿನ ತುರಗನೂರಿನಲ್ಲಿರುವ ಪತಿಯ ಮನೆಗೆ ತೆರಳಿದ್ದಾಗ ಇಬ್ಬರ ನಡುವೆ ಜಗಳವಾಗಿ, ಆರೋಪಿಯು ಪತ್ನಿಯ ತಲೆಗೆ ತಲವಾರಿನಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು. ಅಲ್ಲಿಂದ ಮಂಡ್ಯದಲ್ಲಿರುವ ಚಿಕ್ಕಮ್ಮನ ಮನೆಗೆ ತೆರಳಿದ್ದ ಆರೋಪಿ, ನಂತರ ಬೆಂಗಳೂರಿನ ಸಂಬಂಧಿಕರೊಬ್ಬರ ಮನೆಗೆ ಹೋಗಿದ್ದರು.
‘ಆ ಬಗ್ಗೆ ಮಾಹಿತಿ ಪಡೆದ ಜಿಲ್ಲಾ ಪೊಲೀಸರ ತಂಡ ಆತನನ್ನು ಬಂಧಿಸಿ, ಸ್ಥಳ ಮಹಜರು ನಡೆಸಿದ್ದಾರೆ’ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.