ADVERTISEMENT

ನಂಜನಗೂಡು: ಬೈಕ್ ಸಮೇತ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಯುವಕನ ದೇಹ ಪತ್ತೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2026, 6:56 IST
Last Updated 1 ಜನವರಿ 2026, 6:56 IST
ಆದಿತ್ಯ
ಆದಿತ್ಯ   

ನಂಜನಗೂಡು: ನಗರದ ಹೊರವಲಯದ ಕೊರೆಹುಂಡಿಗೆ ತೆರಳುವ ರಸ್ತೆಯಲ್ಲಿ ಮಂಗಳವಾರ ಬೈಕ್ ಸಮೇತ ಯುವಕನ ಶವ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಯುವಕನ ಸಾವಿನ ಬಗ್ಗೆ ಕುಟುಂಬದವರು ಶಂಕೆ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.

ತಾಲ್ಲೂಕಿನ ರಾಂಪುರ ಗ್ರಾಮದ ನಿವಾಸಿ ಬಸವಣ್ಣ ಎಂಬುವರ ಪುತ್ರ ಆದಿತ್ಯ (23) ಮೃತಪಟ್ಟವರು. ನಂಜನಗೂಡಿನಿಂದ ಕೊರೆಹುಂಡಿಗೆ ತೆರಳುವ ರಸ್ತೆಯಲ್ಲಿ ಹುಲ್ಲಹಳ್ಳಿ ನಾಲೆ ಸಮೀಪದ ನಿರ್ಜನ ಪ್ರದೇಶದಲ್ಲಿ ಬೈಕ್ ಹಾಗೂ ಆದಿತ್ಯನ ಶವ ಸಂಪೂರ್ಣ ಸುಟ್ಟಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಕಾರ್ಖಾನೆಯೊಂದರಲ್ಲಿ ಗುತ್ತಿಗೆ ಆಧಾರದ ನೌಕರನಾಗಿ ಕೆಲಸ ನಿರ್ವಹಿಸುತ್ತಿದ್ದ ಆದಿತ್ಯ ಸೋಮವಾರ ಬೆಳಿಗ್ಗೆ ಮನೆಯಿಂದ ಹೋದವನು ವಾಪಸ್ ಬಂದಿರಲಿಲ್ಲ. ರಾತ್ರಿ ಬೈಕ್ ಸಮೇತ ಬೆಂಕಿಗಾಹುತಿ ಆಗಿರುವುದಾಗಿ ಪರಿಚಿತರು ಪೋನ್ ಮೂಲಕ ಪೋಷಕರಿಗೆ ಮಾಹಿತಿ ನೀಡಿದ್ದಾರೆ. ಈ ಸಂಬಂಧ ಮೃತನ ತಂದೆ ಮಗನ ಸಾವಿನ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದಾರೆ, ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.