ADVERTISEMENT

ಕಾಲಮಿತಿಯಲ್ಲಿ ಕಾಮಗಾರಿ ಮುಗಿಸಿ: ಶಾಸಕ ದರ್ಶನ್ ಧ್ರುವನಾರಾಯಣ

​ಪ್ರಜಾವಾಣಿ ವಾರ್ತೆ
Published 3 ಡಿಸೆಂಬರ್ 2025, 7:47 IST
Last Updated 3 ಡಿಸೆಂಬರ್ 2025, 7:47 IST
ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಂಗಳವಾರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನಡೆಸಿದರು.                                       
ನಂಜನಗೂಡು ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ಶಾಸಕ ದರ್ಶನ್ ಧ್ರುವನಾರಾಯಣ ಮಂಗಳವಾರ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ನಡೆಸಿದರು.                                          

ನಂಜನಗೂಡು: ತಾಲ್ಲೂಕಿನ ಗೋಳೂರು ಗ್ರಾಮದಲ್ಲಿ ₹1.5 ಕೋಟಿ ವೆಚ್ಚದ ಸಿಸಿ ರಸ್ತೆ, ಚರಂಡಿ ನಿರ್ಮಾಣ ಕಾಮಗಾರಿ ಹಾಗೂ ಮಾದರಿ ಗ್ರಾಮ ಯೋಜನೆಯಲ್ಲಿ ವಿದ್ಯುತ್ ಮಾರ್ಗಗಳ ನಿರ್ವಹಣಾ ಕಾಮಗಾರಿಗೆ ಶಾಸಕ ದರ್ಶನ್ ಧ್ರುವನಾರಾಯಣ ಚಾಲನೆ ನೀಡಿದರು.

‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ₹25 ಕೋಟಿ ವಿಶೇಷ ಅನುದಾನ ನೀಡಿದ್ದು, ಅದರಲ್ಲಿ ₹20 ಕೋಟಿಗಳನ್ನು ತಾಲ್ಲೂಕಿನ ಸಾಮಾನ್ಯ ವರ್ಗಗಳ ಜನ ವಾಸಿಸುವ ಬೀದಿಗಳಲ್ಲಿ ರಸ್ತೆ ಕಾಮಗಾರಿ ನಡೆಸಲು ಮೀಸಲಿಡಲಾಗಿದೆ. ₹14.50 ಲಕ್ಷ ವೆಚ್ಚದಲ್ಲಿ ಹಳೇಪುರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಹೊಸ ಕಟ್ಟಡ ಕಾಮಗಾರಿಗೆ, ಕುರಹಟ್ಟಿ ಗ್ರಾಮದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಂಜೂರಾದ ಅನುದಾನದಲ್ಲಿ ಗೆಜ್ಜೆಗಾರ ಕಾಲೊನಿ, ನಾಯಕರ ಕಾಲೊನಿಗಳಲ್ಲಿ ತಲಾ ₹20 ಲಕ್ಷ ವೆಚ್ಚದ ರಸ್ತೆ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ’ ಎಂದು ಅವರು ಹೇಳಿದರು.

‘ಬದನವಾಳು ಖಾದಿ ಗ್ರಾಮೋದ್ಯೋಗ ಕೇಂದ್ರದಲ್ಲಿ ₹25 ಲಕ್ಷ ವೆಚ್ಚದಲ್ಲಿ ಕಾಂಪೌಂಡ್ ನಿರ್ಮಾಣ, ಹುಣಸನಾಳು ಗ್ರಾಮದಲ್ಲಿ ₹1 ಕೋಟಿ ವೆಚ್ಚದ ರಸ್ತೆ, ಮುದ್ದಹಳ್ಳಿ ಗ್ರಾಮದಲ್ಲಿ 4 ಮೆಗಾವ್ಯಾಟ್ ಸೌರ ಘಟಕ ಕಾಮಗಾರಿಗಳಿಗೆ ಚಾಲನೆ ಸೇರಿದಂತೆ ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಒಟ್ಟು ₹3.13 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ, ಗುತ್ತಿಗೆದಾರರು ಕಾಲಮಿತಿಯಲ್ಲಿ ಗುಣಮಟ್ಟದ ಕಾಮಗಾರಿ ನಡೆಸಿ ಸೇವೆಗೆ ಒದಗಿಸಬೇಕು’ ಎಂದು ಹೇಳಿದರು.

ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಕುರಹಟ್ಟಿ ಮಹೇಶ್, ಬಿಇಒ ಮಹೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷ ವನಕರ ನಾಯಕ, ವೀರೇಂದ್ರ, ನೇರಳೆ ಮಹೇಶ್, ಸಿದ್ದನಾಯಕ, ಪ್ರಕಾಶ್, ನಾರಾಯಣಸ್ವಾಮಿ, ಲತಾ, ಸೋಮು, ವಿಜಯ್ ಕುಮಾರ್, ರಂಗಸ್ವಾಮಿ, ವಸಂತ್, ಶ್ರೀನಿವಾಸ್, ನಿರಂಜನ್, ಕೃಷ್ಣ ಶೆಟ್ಟಿ, ರಂಗಶೆಟ್ಟಿ, ಚಿನ್ನದಗುಡಿ ಹುಂಡಿ ಶಿವಸ್ವಾಮಿ, ವೇರೇದೇವನಪುರ ವಿಜಯ್ ಕುಮಾರ್, ಶ್ರೀನಿವಾಸ ಮೂರ್ತಿ, ರಂಗದಾಸ್ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.