
ಸಾವು
(ಪ್ರಾತಿನಿಧಿಕ ಚಿತ್ರ)
ನಂಜನಗೂಡು: ನಗರದ ಚಾಮುಂಡಿ ಟೌನ್‌ಶಿಪ್ ಬಳಿ ಭಾನುವಾರ ದ್ವಿಚಕ್ರ ವಾಹನಕ್ಕೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ಮೂವರು ಮೃತಪಟ್ಟಿದ್ದಾರೆ.
ಮೈಸೂರಿನ ಕುಂಬಾರಕೊಪ್ಪಲು ಬಡಾವಣೆ ನಿವಾಸಿ, ಚಾಮರಾಜನಗರ ತಾಲ್ಲೂಕಿನ ಉದ್ದನೂರು ಗ್ರಾಮದ ಶಿವಮೂರ್ತಿ (51), ಅವರ ಪತ್ನಿ ಚೆನ್ನಾಜಮ್ಮ(46) ಹಾಗೂ ಪುತ್ರ ಸಿದ್ದಾರ್ಥ (15) ಮೃತಪಟ್ಟವರು.
ಶಿವಮೂರ್ತಿ ಅವರು ಕುಟುಂಬ ಸಮೇತ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದೇವಾಲಯಕ್ಕೆ ದರ್ಶನಕ್ಕೆ ಬರುತ್ತಿದ್ದರು.
ನಗರದ ಪ್ರವೇಶ ದ್ವಾರದ ಚಾಮುಂಡಿ ಟೌನ್‌ಶಿಪ್ ಬಳಿ ಮೈಸೂರಿನಿಂದ ಗುಂಡ್ಲುಪೇಟೆ ಕಡೆಗೆ ತೆರಳುತ್ತಿದ್ದ ಬಸ್ ಹಿಂಬದಿಯಿಂದ ಡಿಕ್ಕಿ ಹೊಡೆದಿದೆ ಎಂದು ಸಂಚಾರ ಠಾಣೆ ಪೊಲೀಸರು ತಿಳಿಸಿದ್ದಾರೆ.
ಸಂಚಾರ ಠಾಣೆಯ ಪಿಎಸ್ಐ ಕೃಷ್ಣಕಾಂತ ಕೋಳಿ ಮತ್ತು ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದರು. ಬಸ್ ಅನ್ನು ಪೊಲೀಸರು ವಶಕ್ಕೆ ಪಡೆದಿದ್ದು, ನಂಜನಗೂಡು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.