
ನಂಜನಗೂಡು: ‘ರಾಜ್ಯದಲ್ಲಿ ಮೊದಲ ಬಾರಿಗೆ ನಗರಸಭೆ ವ್ಯಾಪ್ತಿಯ ವಾರ್ಡ್‌ಗಳ ಸಮಸ್ಯೆಗಳನ್ನು ಬಗೆಹರಿಸುವ ಸಲುವಾಗಿ ಕ್ಯೂಆರ್ ಕೋಡ್ ಸೌಲಭ್ಯ ಜಾರಿ ತರಲಾಗಿತ್ತು. ಆ ಮೂಲಕ ಸಾಕಷ್ಟು ದೂರುಗಳು ಬಂದಿವೆ’ ಎಂದು ಶಾಸಕ ದರ್ಶನ್ ಧ್ರುವನಾರಾಯಣ ಹೇಳಿದರು.
ನಗರದ ತಾಲ್ಲೂಕು ಪಂಚಾಯಿತಿ ಕಾರ್ಯಾಲಯದಲ್ಲಿ ಸೋಮವಾರ ನಗರಸಭೆಯ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು
‘ನಾಗರಿಕರ ಸಮಸ್ಯೆಗಳಿಗೆ ನಿಮ್ಮ ವ್ಯಾಪ್ತಿಯಲ್ಲಿಯೇ ತುರ್ತಾಗಿ ಪರಿಹಾರ ನೀಡಲಾಗಿದೆ. ಪ್ರಮುಖ ಸಮಸ್ಯೆಗಳ ಇತ್ಯರ್ಥಕ್ಕೆ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿದೆ. ನಗರಸಭೆ ಸೇವೆಗಳ ಮಾಹಿತಿ ಹಾಗೂ ವಾರ್ಡ್ ಸಮಸ್ಯೆಗಳ ಬಗ್ಗೆ ದೂರು ನೀಡಲು ಪ್ರತಿ ವಾರ್ಡ್‌ಗಳಲ್ಲಿ ಕ್ಯೂಆರ್ ಕೋಡ್ ಫಲಕ ಹಾಕಿಸಿದ್ದು, ಈ ಸೌಲಭ್ಯ ಸಾಕಷ್ಟು ಅನುಕೂಲಕರವಾಗಿದೆ’ ಎಂದರು.
‘ಜನರ ಸೇವೆ ಮಾಡದೆ ಕಾಲಹರಣ ಮಾಡುತ್ತಿದ್ದ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯವೈಖರಿಯಲ್ಲಿ ಬದಲಾವಣೆ ತಂದಿದೆ, ನಗರಸಭೆ ಸೇವೆಗಳಲ್ಲಿ ಯಾವುದೇ ಸಮಸ್ಯೆಗಳು ಕಂಡುಬಂದಲ್ಲಿ ತುರ್ತಾಗಿ ಕ್ಯೂಆರ್ ಕೋಡ್ ಬಳಸಿ ಮೇಲಾಧಿಕಾರಿಗಳ ಗಮನಕ್ಕೆ ತರಬಹುದು. ತಕ್ಷಣ ಸಮಸ್ಯೆಗೆ ಪರಿಹಾರವನ್ನು ಕೂಡ ಕಂಡುಕೊಳ್ಳಬಹುದು’ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಕಳಲೆ ಕೇಶವಮೂರ್ತಿ, ಆಯುಕ್ತ ಬಸವರಾಜು, ಎಇಇ ಮಹೇಶ್ ಕುಮಾರ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.