ADVERTISEMENT

ನಂಜನಗೂಡು: ಶಾಲೆ ಕೊಠಡಿ ಕಾಮಗಾರಿಗೆ ಚಾಲನೆ

ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯ: ಡಾ.ಯತಿಂದ್ರ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 6 ಡಿಸೆಂಬರ್ 2025, 5:23 IST
Last Updated 6 ಡಿಸೆಂಬರ್ 2025, 5:23 IST
ನಂಜನಗೂಡು ತಾಲ್ಲೂಕಿನ ತಾಂಡವಪುರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು
ನಂಜನಗೂಡು ತಾಲ್ಲೂಕಿನ ತಾಂಡವಪುರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಶಾಸಕ ಯತೀಂದ್ರ ಸಿದ್ದರಾಮಯ್ಯ ಶುಕ್ರವಾರ ಚಾಲನೆ ನೀಡಿದರು   

ನಂಜನಗೂಡು: ‘ಸರ್ಕಾರಿ ಶಾಲೆಗಳಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿ, ಗುಣಮಟ್ಟದ ಶಿಕ್ಷಣ ಒದಗಿಸುವ ಸಲುವಾಗಿ ವರುಣ ಕ್ಷೇತ್ರ ವ್ಯಾಪ್ತಿಯ ಆಯ್ದ ಗ್ರಾಮಗಳಲ್ಲಿ ₹3.6 ಕೋಟಿ ವೆಚ್ಚದಲ್ಲಿ ನೂತನ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನಡೆಸಿ, ಚಾಲನೆ ನೀಡಲಾಗಿದೆ’ ಎಂದು ಶಾಸಕ ಡಾ.ಯತಿಂದ್ರ ಸಿದ್ದರಾಮಯ್ಯ ಹೇಳಿದರು.

ತಾಲ್ಲೂಕಿನ ತಾಂಡವಪುರ ಸರ್ಕಾರಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಶಾಲಾ ಕೊಠಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

‘ಕ್ಷೇತ್ರದ ಕೆಲವು ಗ್ರಾಮಗಳಲ್ಲಿ ಶಾಲಾ ಕೊಠಡಿಗಳು ಶಿಥಿಲಾವಸ್ಥೆಗೊಂಡು, ಕೊಠಡಿಗಳ ಕೊರತೆ ಉಂಟಾಗಿತ್ತು. ಕೊಠಡಿಗಳ ನಿರ್ಮಾಣ ಮಾಡುವಂತೆ ಗ್ರಾಮಸ್ಥರು ಬೇಡಿಕೆ ಇಟ್ಟಿದ್ದರು. ಕಳೆದ ಬಾರಿ ಸುಮಾರು ₹11 ಕೋಟಿ ಅನುದಾನ ನೀಡಲಾಗಿತ್ತು, ಈ ಬಾರಿ ಕೆಪಿಟಿಸಿಎಲ್ ಸಿಎಸ್ಆರ್ ಅನುದಾನ ಬಳಸಿ ಶಾಲಾ ಕೊಠಡಿಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ, ಆರು ತಿಂಗಳಲ್ಲಿ ಈ ಕಾಮಗಾರಿ ಮುಕ್ತಾಯಗೊಳ್ಳಲಿದೆ’ ಎಂದು ಹೇಳಿದರು.

ADVERTISEMENT

‘ತಾಲ್ಲೂಕಿನ ಕಿರಗುಂದ ಗ್ರಾಮದಲ್ಲಿ ₹15 ಲಕ್ಷ, ಹೊಸಕೋಟೆ ₹30 ಲಕ್ಷ, ಬೊಕ್ಕಹಳ್ಳಿಯಲ್ಲಿ ₹45 ಲಕ್ಷ, ಸುತ್ತೂರು ಗ್ರಾಮದಲ್ಲಿ ₹30 ಲಕ್ಷ, ಮರಳೂರು ಗ್ರಾಮದಲ್ಲಿ ₹30 ಲಕ್ಷ, ಬೀದರಗೂಡು ಗ್ರಾಮದಲ್ಲಿ ₹30 ಲಕ್ಷ, ತಾಂಡವಪುರದಲ್ಲಿ ₹30 ಲಕ್ಷ, ನಗರ್ಲೆ ಗ್ರಾಮದಲ್ಲಿ ₹30 ಲಕ್ಷ ಸೇರಿದಂತೆ ಒಟ್ಟು 2 ಕೋಟಿ 40 ಲಕ್ಷ ವೆಚ್ಚದಲ್ಲಿ 8 ಗ್ರಾಮಗಳಲ್ಲಿ 16 ಶಾಲಾ ಕೊಠಡಿಗಳನ್ನು ನಿರ್ಮಿಸಲಾಗುವುದು. ಮಲ್ಲೂಪುರದಲ್ಲಿ ₹30 ಲಕ್ಷ, ಗೋಣಹಳ್ಳಿ ₹30 ಲಕ್ಷ, ಬೀದರಗೂಡು ₹45 ಲಕ್ಷ, ಹಾರೋಪುರಯಲ್ಲಿ ₹15 ಲಕ್ಷ ವೆಚ್ಚದಲ್ಲಿ ಈಗಾಗಲೇ ನಿರ್ಮಾಣಗೊಂಡಿರುವ ಶಾಲಾ ಕೊಠಡಿಗಳನ್ನು ಉದ್ಘಾಟನೆ ಗೊಳಿಸಲಾಗಿದೆ’ ಎಂದರು.

ವರುಣ ಮಾದರಿ ಕ್ಷೇತ್ರವಾಗಿ ನಿರ್ಮಾಣ: ‘ವರುಣ ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಲಾಗಿದೆ. ತಾಂಡವಪುರದಲ್ಲಿ ಆಗಬೇಕಿರುವ ಕೆಲಸಗಳ ಪಟ್ಟಿ ಮಾಡಲಾಗಿದ್ದು, ಮೂಡಾದಿಂದ ₹5 ಕೋಟಿ ಅನುದಾನವನ್ನು ಬಿಡುಗಡೆಗೊಳಿಸಿ ಅಭಿವೃದ್ಧಿಪಡಿಸಲಾಗುವುದು, ವರುಣ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸಲು ಬದ್ಧರಾಗಿದ್ದೇವೆ’ ಎಂದರು.

ಜಿ.ಪಂ ಮಾಜಿ ಅಧ್ಯಕ್ಷ ಬಿ.ಎಂ.ರಾಮು, ರಾಜ್ಯ ವಾಲ್ಮೀಕಿ ನಿಗಮದ ಮಾಜಿ ಅಧ್ಯಕ್ಷ ಎಸ್.ಸಿ.ಬಸವರಾಜು, ಮೃಗಾಲಯ ಪ್ರಾಧಿಕಾರ ಅಧ್ಯಕ್ಷ ಹಾಡ್ಯ ರಂಗಸ್ವಾಮಿ, ಜಿ.ಪಂ. ಮಾಜಿ ಸದಸ್ಯ ದಯಾನಂದ, ವಿಶ್ವಕರ್ಮ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ನಂದಕುಮಾರ್, ಎಸ್.ಡಿ.ಎಂ.ಸಿ ಅಧ್ಯಕ್ಷ ಮಹದೇವಸ್ವಾಮಿ, ಉಪಾಧ್ಯಕ್ಷ ಜ್ಯೋತಿ, ಸದಸ್ಯರಾದ ರಾಮು, ರವಿ, ಮಹೇಶ್, ಮುಖಂಡರಾದ ದಕ್ಷಿಣಮೂರ್ತಿ, ರವಿಪ್ರಕಾಶ್, ಟಿ.ಎಲ್. ಮೋಹನ್ ಕುಮಾರ್, ರವಿಪ್ರಕಾಶ್, ಬಿ.ಪಿ. ಮಹದೇವು, ಹೆಬ್ಯಾರಾಜು, ಪ್ರಕಾಶ್, ಗ್ರಾ.ಪಂ.ಸದಸ್ಯ ರೇವಮ್ಮ, ಗಿರಿಧರ್, ಕಲ್ಮಹಳ್ಳಿಬಾಬು, ಮುದ್ದುಮಾದೇಗೌಡ, ತಹಶೀಲ್ದಾರ್ ಶಿವಕುಮಾರ್ ಕಾಸ್ನೂರು, ತಾ.ಪಂ.ಇಒ ಜೆರಾಲ್ಡ್ ರಾಜೇಶ್ ಉಪಸ್ಥಿತರಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.