ADVERTISEMENT

ನಂಜನಗೂಡು | ಬಸವ ಜಯಂತಿ: ಸಂಭ್ರಮದ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 25 ಮೇ 2025, 14:02 IST
Last Updated 25 ಮೇ 2025, 14:02 IST
ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಭಾನುವಾರ ಸಂಭ್ರಮದಿಂದ ಬಸವ ಜಯಂತಿ ಮೆರವಣಿಗೆ ನಡೆಯಿತು
ನಂಜನಗೂಡು ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಭಾನುವಾರ ಸಂಭ್ರಮದಿಂದ ಬಸವ ಜಯಂತಿ ಮೆರವಣಿಗೆ ನಡೆಯಿತು   

ನಂಜನಗೂಡು: ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಭಾನುವಾರ ಸಡಗರದಿಂದ ಬಸವ ಜಯಂತಿ ಕಾರ್ಯಕ್ರಮವನ್ನು ಆಚರಿಸಲಾಯಿತು.

ಗ್ರಾಮದ ಸೋಮೇಶ್ವರ ದೇವಸ್ಥಾನದ ಮುಂಭಾಗದಲ್ಲಿ, ಬಸವಣ್ಣ ಮತ್ತು ಶಿವಕುಮಾರ ಸ್ವಾಮೀಜಿಯವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮೆರವಣಿಗೆಗೆ ಚಾಲನೆ ನೀಡಲಾಯಿತು.

ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗವಹಿಸಿದ್ದರು. ಬಸವ ರಥವು ಸಾಗುವ ರಸ್ತೆಯುದ್ದಕ್ಕೂ ಹಸಿರು ತೋರಣ ಹಾಗೂ ವಿದ್ಯುತ್ ದೀಪಗಳಿಂದ ಸಿಂಗರಿಸಲಾಗಿತ್ತು.

ADVERTISEMENT

ಮೆರವಣಿಗೆಯಲ್ಲಿ ಮಂಗಳವಾದ್ಯ, ವೀರಗಾಸೆ, ಕಂಸಾಳೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ರಂಗು ತಂದವು. ಬಸವ ಜಯಂತಿ ಪ್ರಯುಕ್ತ ಅನ್ನಸಂತರ್ಪಣೆ ಮಾಡಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.