ಅಪಾರ ಭಕ್ತರ ಮುಗಿಲು ಮುಟ್ಟಿದ ಜಯಘೋಷಗಳೊಂದಿಗೆ 'ಶ್ರೀಕಂಠೇಶ್ವರ ಸ್ವಾಮಿ ಮಹಾ ರಥೋತ್ಸವ' ಬುಧವಾರ ಬೆಳಿಗ್ಗೆ 6ಕ್ಕೆ ನಂಜನಗೂಡಿನಲ್ಲಿ ಅದ್ದೂರಿಯಾಗಿ ನೆರವೇರಿತು. ನಂಜುಂಡೇಶ್ವರ ಸ್ವಾಮಿ ತೇರು ರಾಜಠೀವಿಯಲ್ಲಿ ಸಾಗುತ್ತಿದ್ದರೆ, ಭಕ್ತರ ಬೆರಗುಗಣ್ಣಿನಿಂದ ನೋಡುತ್ತಲೇ ಭಕ್ತಿಯಿಂದ ಕೈಮುಗಿದರು. ಹಣ್ಣು–ಜವನವನ್ನು ತೇರಿಗೆ ಎಸೆದು ಸಂಭ್ರಮಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.