
ಪ್ರಜಾವಾಣಿ ವಾರ್ತೆ
ಬಂಧನ (ಸಾಂದರ್ಭಿಕ ಚಿತ್ರ)
ಮೈಸೂರು: ನಗರದ ಹೆಬ್ಬಾಳದಲ್ಲಿರುವ ಕೈಗಾರಿಕಾ ಪ್ರದೇಶದಲ್ಲಿರುವ ಕಟ್ಟಡವೊಂದರಲ್ಲಿ ಡ್ರಗ್ಸ್ ಉತ್ಪಾದನೆ ಮಾಡುತ್ತಿದ್ದಾರೆ ಎಂಬ ಅನುಮಾನದಲ್ಲಿ ದಾಳಿ ನಡೆಸಿದ ಎನ್‌ಸಿಬಿ (ನಾರ್ಕೊಟಿಕ್ ಕಂಟ್ರೋಲ್ ಬ್ಯೂರೊ) ತಂಡವು ಗಣಪತ್ ಲಾಲ್ ನನ್ನು ಬಂಧಿಸಿದೆ.
ಗಣಪತ್ ಲಾಲ್ ಜೆ.ಕೆ ಟಯರ್ಸ್ ಹಿಂಭಾಗದ ರಸ್ತೆಯಲ್ಲಿರುವ ಕಟ್ಟಡದಲ್ಲಿ ರಾಸಾಯನಿಕ ತಯಾರಿಕ ಘಟಕ ನಡೆಸುತ್ತಿದ್ದರು.
ರಾಜಸ್ಥಾನದಲ್ಲಿ ಮಾದಕ ವಸ್ತು ಮಾರಾಟ ಪ್ರಕರಣದಲ್ಲಿ ಗಣಪತ್ ಲಾಲ್ ಸಂಬಂಧಿಕ ಬಂಧಿಯಾಗಿದ್ದು, ಆತ ನೀಡಿದ ಮಾಹಿತಿ ಆಧರಿಸಿ ಮೈಸೂರಿನ ಘಟಕಕ್ಕೆ ಬುಧವಾರ ಬೆಳಿಗ್ಗೆ ದಾಳಿ ನಡೆಸಿದ್ದರು.
ತೀವ್ರ ವಿಚಾರಣೆಯ ಬಳಿಕ ಗುರುವಾರ ಸಂಜೆ ಜಿಲ್ಲಾ ನ್ಯಾಯಾಲಯದ ಮೂರನೇ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿ, ಆರೋಪಿಯನ್ನು ಹೊರರಾಜ್ಯಕ್ಕೆ ಕೊಂಡಯ್ಯಲು ಅನುಮತಿ ಪಡೆದು ತೆರಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.