ADVERTISEMENT

ಹೊಸ ಕಾರ್ಮಿಕ ಸಂಹಿತೆಗೆ ವಿರೋಧ: ಸಂಹಿತೆ ವಾಪಸ್‌ ಪಡೆಯಲು ಎಐಯುಟಿಯುಸಿ ಆಗ್ರಹ

ಕರಾಳ ಸಂಹಿತೆ ವಾಪಸ್‌ ಪಡೆಯಲು ಎಐಯುಟಿಯುಸಿ ಆಗ್ರಹ

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2020, 1:57 IST
Last Updated 8 ಅಕ್ಟೋಬರ್ 2020, 1:57 IST
ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು (ಎಡಚಿತ್ರ). ದಸರಾ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು
ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಎಐಯುಟಿಯುಸಿ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು (ಎಡಚಿತ್ರ). ದಸರಾ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಒತ್ತಾಯಿಸಿ ಮೈಸೂರು ಕನ್ನಡ ವೇದಿಕೆ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು   

ಮೈಸೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕಾರ್ಮಿಕ ಸಂಹಿತೆಗಳನ್ನು ವಾಪಸ್‌ ಪಡೆಯಬೇಕು ಎಂದು ಆಗ್ರಹಿಸಿ ಆಲ್‌ ಇಂಡಿಯಾ ಯುನೈಟೆಡ್‌ ಟ್ರೇಡ್‌ ಯೂನಿಯನ್‌ ಸೆಂಟರ್ (ಎಐಯುಟಿಯುಸಿ) ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.

ಜಿಲ್ಲಾಧಿಕಾರಿ ಕಚೇರಿ ಮುಂದೆ ಸೇರಿದ ಪ್ರತಿಭಟನಕಾರರು ಕೇಂದ್ರ ಸರ್ಕಾರದ ಕಾರ್ಮಿಕ ವಿರೋಧಿ
ನೀತಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಉದ್ಯೋಗ ಭದ್ರತೆ, ಆರೋಗ್ಯ ಮತ್ತು ಕೆಲಸದ ಪರಿಸ್ಥಿತಿಗಳ ಕಾಯ್ದೆ, ಕೈಗಾಗಿಕಾ ಸಂಬಂಧಗಳ ಕಾಯ್ದೆ ಮತ್ತು ಸಾಮಾಜಿಕ ಭದ್ರತೆ ಕಾಯ್ದೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.

ADVERTISEMENT

ಕೈಗಾರಿಕಾ ವಿವಾದ ಕಾಯ್ದೆ 1947ರ ಪ್ರಕಾರ 100ಕ್ಕಿಂತ ಹೆಚ್ಚು ಕೆಲಸಗಾರರಿರುವ ಒಂದು ಕಾರ್ಖಾನೆಯು ಕಾರ್ಮಿಕರನ್ನು ಕೆಲಸದಿಂದ ತೆಗೆಯುವ ಅಥವಾ ಮುಚ್ಚುವ ಮುನ್ನ ಸರ್ಕಾರದ ಅನುಮತಿ ಪಡೆಯಬೇಕು. ಆದರೆ ಈಗ ಈ ಮಿತಿಯನ್ನು 300ಕ್ಕೆ ಹೆಚ್ಚಿಸಲಾಗಿದ್ದು, ಮಾಲೀಕರಿಗೆ ತಮ್ಮ ಇಷ್ಟದಂತೆ ಕಾರ್ಮಿಕರನ್ನು ಕೆಲಸದಿಂದ ತೆಗೆದುಹಾಕುವ ಅಧಿಕಾರ ದೊರೆತಿದೆ ಎಂದು ದೂರಿದರು.

ಈ ಕಾರ್ಮಿಕ ಸಂಹಿತೆಗಳನ್ನು ವಾಪಸ್ ಪಡೆಯಬೇಕು. ಕಾರ್ಮಿಕರು ಹಲವಾರು ವರ್ಷಗಳ ಹೋರಾಟದಿಂದ ಗಳಿಸಿದ ಎಲ್ಲ ಸವಲತ್ತುಗಳು, ಹಕ್ಕುಗಳನ್ನು ಪುನರ್‌ಸ್ಥಾಪಿಸಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕಾರ್ಯದರ್ಶಿ ಚಂದ್ರಶೇಖರ ಮೇಟಿ ಮತ್ತಿತರರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.