ADVERTISEMENT

ಚಾಮುಂಡಿ ಬೆಟ್ಟದಲ್ಲಿ ಮಹಿಷ ದಸರಾಕ್ಕೆ ಅವಕಾಶವಿಲ್ಲ: ಪ್ರತಿಮೆಗೆ ಬಟ್ಟೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2022, 16:17 IST
Last Updated 24 ಸೆಪ್ಟೆಂಬರ್ 2022, 16:17 IST
ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.
ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.   

ಮೈಸೂರು:ಚಾಮುಂಡಿಬೆಟ್ಟದ ಮಹಿಷ ಪ್ರತಿಮೆ ಬಳಿ ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮಹಿಷ ದಸರಾ ಆಚರಣೆಗೆ ಸಿದ್ಧತೆ ನಡೆಸಲಾಗಿತ್ತಾದರೂ, ಪೊಲೀಸರು ಅದಕ್ಕೆ ಅನುಮತಿಯನ್ನು ನಿರಾಕರಿಸಿದ್ದಾರೆ.

ಮಹಿಷ ಪ್ರತಿಮೆಯ ಸುತ್ತಲಿನ ಜಾಗದಲ್ಲಿ ಪೊಲೀಸರು ಬ್ಯಾರಿಕೇಡ್ ಅಳವಡಿಸಿದ್ದು, ಪೊಲೀಸರನ್ನು ನಿಯೋಜಿಸಲಾಗಿದೆ. ಮಹಿಷ ಪ್ರತಿಮೆಗೆ ಮಾಲಾರ್ಪಣೆ ಸೇರಿದಂತೆ ಪುಷ್ಪಾರ್ಚನೆಗೆ ತೆರಳಬಹುದೆಂಬ ಕಾರಣಕ್ಕೆ ಪ್ರತಿಮೆಯನ್ನು ಬಟ್ಟೆಯಿಂದ ಮುಚ್ಚಲಾಗಿದೆ.

ಬೆಟ್ಟಕ್ಕೆ ತೆರಳುವ ವಾಹನಗಳನ್ನು ಪ್ರವೇಶಕ್ಕೆ ಮುನ್ನವೇ ಸಂಪೂರ್ಣ ತಪಾಸಣೆ ನಡೆಸಿಯೇ ಬಿಡಲಾಗುತ್ತಿದೆ. ಹೆಚ್ಚಿನ ಪೊಲೀಸ್ ಭದ್ರತೆಯನ್ನು ಅಲ್ಲಿ ಮಾಡಲಾಗಿದೆ.

ADVERTISEMENT

‘ಮಹಿಷ ದಸರಾ ಆಚರಿಸಲು ಅನುಮತಿ ಕೋರಿ ತಮ್ಮ ಕಚೇರಿಗೆ ಯಾರೂ ಮನವಿ ಸಲ್ಲಿಸಿಲ್ಲ’ ಎಂದು ಚಂದ್ರಗುಪ್ತ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.