
ಸಿದ್ದರಾಮಯ್ಯ ಮತ್ತು ಯತೀಂದ್ರ ಸಿದ್ದರಾಮಯ್ಯ
ಮೈಸೂರು: ‘ಮುಖ್ಯಮಂತ್ರಿ ಬದಲಾಯಿಸುವ ಪರಿಸ್ಥಿತಿ ಸದ್ಯಕ್ಕಿಲ್ಲ. ಹೈಕಮಾಂಡ್‌ಗೆ ನೀಡಿರುವ ಮಾತಿನಂತೆ ನಡೆದುಕೊಳ್ಳುತ್ತಾರೆ’ ಎಂದು ವಿಧಾನಪರಿಷತ್ ಸದಸ್ಯ ಯತೀಂದ್ರ ಸಿದ್ದರಾಮಯ್ಯ ತಿಳಿಸಿದರು.
ಇಲ್ಲಿ ಗುರುವಾರ ಮಾಧ್ಯಮದೊಂದಿಗೆ ಮಾತನಾಡಿ, ಡಿ.ಕೆ.ಶಿವಕುಮಾರ್ ಅವರ ಕೊಟ್ಟ ಮಾತು ಉಳಿಸಿಕೊಳ್ಳಬೇಕು ಎಂಬ ಅರ್ಥವಿರುವ ಟ್ವಿಟರ್ ಪೋಸ್ಟ್ ಬಗ್ಗೆ ಪ್ರತಿಕ್ರಿಯಿಸಿದರು.
‘ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದಾರೆ. ಅವರ ವಿರುದ್ಧ ಯಾವುದೇ ದೂರಿಲ್ಲ. ಆದರೂ ಕೆಲವರು ಬೇರೆಯವರಿಗೆ ಮುಖ್ಯಮಂತ್ರಿ ಸ್ಥಾನ ನಿಡಬೇಕೆಂದು ಕೇಳಿದ್ದಾರೆ. ಅದರ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ’ ಎಂದು ಸ್ಪಷ್ಟಪಡಿಸಿದರು.
ನಿರ್ಮಲಾನಂದ ಸ್ವಾಮೀಜಿ ಅವರು ಡಿಕೆಶಿ ಪರವಾಗಿ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ‘ನಮ್ಮ ಪಕ್ಷದಲ್ಲಿ ಯಾರು ಮುಖ್ಯಮಂತ್ರಿ ಆಗಬೇಕಾದವರು ಎಂಬುದನ್ನು ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಬೇರೆಯವರ ಅಭಿಪ್ರಾಯಕ್ಕೆ ಪ್ರತಿಕ್ರಿಯಿಸುವುದಿಲ್ಲ’ ಎಂದು ತಿಳಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.