ADVERTISEMENT

ಪ್ರವಾಸಿಗರ ಮೇಲೆ ನಿರ್ಬಂಧ ಇಲ್ಲ: ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2020, 2:20 IST
Last Updated 2 ನವೆಂಬರ್ 2020, 2:20 IST

ಮೈಸೂರು: ಕೋವಿಡ್‌ ಅನ್‌ಲಾಕ್‌–5 ಮಾರ್ಗಸೂಚಿ ಪ್ರಕಾರ ಒಂದು ಪ್ರದೇಶದಲ್ಲಿ ಲಾಕ್‌ಡೌನ್‌ ಮಾಡುವ ಅಥವಾ ಪ್ರವೇಶ ತಡೆಯಲು ಸಾಧ್ಯವಿಲ್ಲ. ಆದ್ದರಿಂದ ಮೈಸೂರಿಗೆ ಬರುವ ಪ್ರವಾಸಿಗರ ಮೇಲೆ ನಿರ್ಬಂಧ ಹೇರುವುದಿಲ್ಲ ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ತಿಳಿಸಿದರು.

ಕೇರಳದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಿದ್ದು,ಅಲ್ಲಿಂದ ಬರುವ ಪ್ರವಾಸಿಗರ ಮೇಲೆ ನಿರ್ಬಂಧ ವಿಧಿಸಲಾಗುವುದೇ ಎಂಬ ಪ್ರಶ್ನೆಗೆ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಮೈಸೂರಿಗೆ ಬರುವ ಪ್ರವಾಸಿಗರು ಮೃಗಾಲಯ, ಚಾಮುಂಡಿಬೆಟ್ಟ, ಅರಮನೆ ಸೇರಿದಂತೆ ಹಲವು ತಾಣಗಳಿಗೆ ಭೇಟಿ ನೀಡುತ್ತಾರೆ. ಅವರನ್ನು ಎಲ್ಲಾದರೂ ಒಂದು ಕಡೆ ಪರೀಕ್ಷೆಗೆ ಒಳಪಡಿಸುವುದು ಜಿಲ್ಲಾಡಳಿತದ ಉದ್ದೇಶ. ಆದ್ದರಿಂದ ಅರಮನೆ ಪ್ರವೇಶಕ್ಕೆ ಕೋವಿಡ್‌ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ. ಅಲ್ಲಿ ಇದುವರೆಗೆ 9 ಪಾಸಿಟಿವ್‌ ಪ್ರಕರಣಗಳು ವರದಿಯಾಗಿವೆಎಂದರು.

ADVERTISEMENT

ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಪ್ರಕರಣಗಳು ಮತ್ತು ಸಾವಿನ ಪ್ರಮಾಣ ಇಳಿಕೆಯಾಗಿದೆ. ಆದರೂ ಇನ್ನೂ ಕೆಲವು ದಿನ ಎಚ್ಚರಿಕೆಯಿಂದ ಇರುವುದು ಅಗತ್ಯ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.