ADVERTISEMENT

ಮೈಸೂರು | ಎನ್‌ಆರ್‌ಐ ಕೋಟಾ ರದ್ದುಪಡಿಸಿ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2025, 7:12 IST
Last Updated 11 ಸೆಪ್ಟೆಂಬರ್ 2025, 7:12 IST
ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ರದ್ದುಪಡಿಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು- ಪ್ರಜಾವಾಣಿ ಚಿತ್ರ
ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ರದ್ದುಪಡಿಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ಮಾಡಿದರು- ಪ್ರಜಾವಾಣಿ ಚಿತ್ರ   

ಮೈಸೂರು: ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ರದ್ದುಪಡಿಲು ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಎಐಡಿಎಸ್‌ಒ ವಿದ್ಯಾರ್ಥಿ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ಸಂಘಟನೆಯ ಜಿಲ್ಲಾ ಕಾರ್ಯದರ್ಶಿ ನಿತಿನ್ ಮಾತನಾಡಿ, ‘2025-26ನೇ ಸಾಲಿನಿಂದ ರಾಜ್ಯದ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಶೇ 15 ಎನ್‌ಆರ್‌ಐ ಕೋಟಾವನ್ನು ಆರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಇದರಿಂದ ವೈದ್ಯಕೀಯ ಶಿಕ್ಷಣದ ಕನಸು ಹೊತ್ತ ರಾಜ್ಯದ ಬಡ ವಿದ್ಯಾರ್ಥಿಗಳು ಆತಂಕಕ್ಕೊಳಗಾಗಿದ್ದಾರೆ. ಈಗಾಗಲೇ ಅಖಿಲ ಭಾರತ ಕೋಟಾದಡಿ ಶೇ 15 ಸೀಟು ನೀಡಲಾಗುತ್ತಿದೆ. ಎನ್‌ಆರ್‌ಐ ಕೋಟಾಗೆ ನೀಡಿದರೆ 200 ವಿದ್ಯಾರ್ಥಿಗಳ ಒಂದು ಬ್ಯಾಚಿನಲ್ಲಿ 140 ಸೀಟುಗಳು ಮಾತ್ರ ರಾಜ್ಯದ ವಿದ್ಯಾರ್ಥಿಗಳಿಗೆ ಉಳಿದಂತಾಗುತ್ತದೆ’ ಎಂದರು.

‘ಈ ನಿರ್ಧಾರವು ಸರ್ಕಾರಿ ಕಾಲೇಜುಗಳನ್ನು ಖಾಸಗಿ ಸಂಸ್ಥೆಗಳಂತೆ ಲಾಭಗಳಿಸುವ ಕೇಂದ್ರಗಳಾಗಿ ಪರಿವರ್ತಿಸುವ ಅಪಾಯಕಾರಿ ಹೆಜ್ಜೆಯಾಗಿದೆ. ಸರ್ಕಾರ ಈ ನಿರ್ಧಾರದಿಂದ ಹಿಂದೆ ಸರಿಯಬೇಕು’ ಎಂದು ಎಚ್ಚರಿಸಿದರು .

ADVERTISEMENT

ಸಂಘಟನೆ ಜಿಲ್ಲಾಧ್ಯಕ್ಷೆ ಚಂದ್ರಕಲಾ, ಜಿಲ್ಲಾ ಕಾರ್ಯದರ್ಶಿ ನಿತಿನ್, ಜಿಲ್ಲಾ ಉಪಾಧ್ಯಕ್ಷೆ ಸ್ವಾತಿ, ಪದಾಧಿಕಾರಿಗಳಾದ ಚಂದ್ರಿಕಾ, ದಿಶಾ, ಅಂಜಲಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.