ADVERTISEMENT

ಎನ್‌ಟಿಎಂ ಶಾಲೆ; ಮುಂದುವರಿದ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 3 ಜುಲೈ 2021, 7:24 IST
Last Updated 3 ಜುಲೈ 2021, 7:24 IST
ಮಹಾರಾಣಿ ಮಾದರಿ (ಎನ್‌ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಎನ್‌ಟಿಎಂ ಸರ್ಕಾರಿ ಶಾಲೆಯ ಮುಂದೆ ಸತತ 6ನೇ ದಿನವಾದ ಶನಿವಾರವೂ ಪ್ರತಿಭಟನೆ ನಡೆಯಿತು.
ಮಹಾರಾಣಿ ಮಾದರಿ (ಎನ್‌ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಎನ್‌ಟಿಎಂ ಸರ್ಕಾರಿ ಶಾಲೆಯ ಮುಂದೆ ಸತತ 6ನೇ ದಿನವಾದ ಶನಿವಾರವೂ ಪ್ರತಿಭಟನೆ ನಡೆಯಿತು.   

ಮೈಸೂರು: ಮಹಾರಾಣಿ ಮಾದರಿ (ಎನ್‌ಟಿಎಂ) ಶಾಲೆ ಉಳಿಸಿ ಹೋರಾಟ ಒಕ್ಕೂಟದ ವತಿಯಿಂದ ಇಲ್ಲಿನ ಎನ್‌ಟಿಎಂ ಸರ್ಕಾರಿ ಶಾಲೆಯ ಮುಂದೆ ಸತತ 6ನೇ ದಿನವಾದ ಶನಿವಾರವೂ ಪ್ರತಿಭಟನೆ ನಡೆಯಿತು.

ಪ್ರತಿದಿನ ಒಂದೊಂದು ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದು, ಶನಿವಾರ ಆಮ್‌ ಆದ್ಮಿ ಪಾರ್ಟಿ (ಎಎಪಿ) ನೇತೃತ್ವದಲ್ಲಿ ಧರಣಿ ನಡೆಯಿತು.

ಸ್ವಾಮಿ ವಿವೇಕಾನಂದರ ಸ್ಮಾರಕಕ್ಕೆ ಪಕ್ಷದ ವಿರೋಧವಿಲ್ಲ. ಆದರೆ ಐತಿಹಾಸಿಕ ಮಹತ್ವ ಇರುವ ಎನ್ ಟಿಎಂ ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡುವುದಕ್ಕೆ ವಿರೋಧ ಇದೆ ಎಂದು ಎಎಪಿ ಜಿಲ್ಲಾ ಸಂಚಾಲಕಿ ಮಾಲವಿಕ ಗುಬ್ಬಿವಾಣಿ ಹೇಳಿದರು.

ADVERTISEMENT

ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡುವ ಹಟವನ್ನು ತೊರೆಯಬೇಕು. ಶಾಲೆಯೂ ಉಳಿಯಲಿ, ಸ್ಮಾರಕವೂ ನಿರ್ಮಾಣ ಆಗಲಿ ಎಂದು ಒತ್ತಾಯಿಸಿದರು.

ಸಂಸದರ ವಿರುದ್ಧ ಆಕ್ರೋಶ: ಶಾಲೆಯನ್ನು ಕೆಡವಿ ಸ್ಮಾರಕ ನಿರ್ಮಾಣ ಮಾಡಬೇಕು ಎಂದು ಹೇಳಿರುವ ಸಂಸದರಾದ ಪ್ರತಾಪ್ ಸಿಂಹ ಮತ್ತು ಶ್ರೀನಿವಾಸ ಪ್ರಸಾದ್ ವಿರುದ್ಧ ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.