ADVERTISEMENT

ಯೋಗ ಸಂಬಂಧಿ ಮಳಿಗೆಗಳ ಪ್ರದರ್ಶನಕ್ಕೆ ಮೈಸೂರಿನಲ್ಲಿ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 18 ಜೂನ್ 2022, 13:21 IST
Last Updated 18 ಜೂನ್ 2022, 13:21 IST
ಮೈಸೂರಿನ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಯೋಗ ಸಂಬಂಧಿ ಮಳಿಗೆಗಳ ಸಿದ್ದತೆಯನ್ನು ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ಕುಮಾರ್ ಗೌಡ ಮತ್ತು ಅಧಿಕಾರಿಗಳು ವೀಕ್ಷಿಸಿದರು
ಮೈಸೂರಿನ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಯೋಗ ಸಂಬಂಧಿ ಮಳಿಗೆಗಳ ಸಿದ್ದತೆಯನ್ನು ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ಕುಮಾರ್ ಗೌಡ ಮತ್ತು ಅಧಿಕಾರಿಗಳು ವೀಕ್ಷಿಸಿದರು   

ಮೈಸೂರು: ಇಲ್ಲಿನ ದಸರಾ ವಸ್ತುಪ್ರದರ್ಶನ ಆವರಣದಲ್ಲಿ ಯೋಗಕ್ಕೆ ಸಂಬಂಧಿಸಿದ ಪ್ರದರ್ಶನ ಮಳಿಗೆಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ನೆರವೇರಿಸಲಿರುವ ಹಿನ್ನೆಲೆಯಲ್ಲಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ವಸ್ತುಪ್ರದರ್ಶನದ ಆವರಣದಲ್ಲಿ ಆಯುಷ್ ಇಲಾಖೆಯಿಂದ ಯೋಗಕ್ಕೆ ಸಂಬಂಧಪಟ್ಟ ಮಾಹಿತಿ, ಪ್ರಾತ್ಯಕ್ಷಿಕೆಗಳನ್ನು ಒಳಗೊಂಡ 143 ಮಳಿಗೆ ಮತ್ತು ಡಿಜಿಟಲ್ ಮಳಿಗೆಯನ್ನು ಸಜ್ಜುಗೊಳಿಸಲಾಗುತ್ತಿದೆ. ಜೂನ್‌ 21ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆಯಂದು ಸಾಮೂಹಿಕ ಯೋಗ ಪ್ರದರ್ಶನದ ಬಳಿಕ ಪ್ರಧಾನಿ ಉದ್ಘಾಟಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಎಸ್‌ಪಿಜಿ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದೆ ಎಂದು ಕರ್ನಾಟಕ ವಸ್ತುಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಹೇಮಂತ್‌ಕುಮಾರ್ ಗೌಡ ತಿಳಿಸಿದ್ದಾರೆ.

‘ಎಸ್‌ಪಿಜಿ ತಂಡ ಭದ್ರತಾ ದೃಷ್ಟಿಯಿಂದ ಕೈಗೊಳ್ಳುವ ಕ್ರಮಗಳಿಗೆ ಪ್ರಾಧಿಕಾರ ಸಹಕಾರ ನೀಡಲಿದೆ. ಆವರಣದಲ್ಲಿ ಒಂದಷ್ಟು ದುರಸ್ತಿ ಕಾರ್ಯಗಳನ್ನು ತ್ವರಿತವಾಗಿ ನಡೆಸಲಾಗುತ್ತಿದೆ. ವ್ಯವಸ್ಥಿತವಾಗಿ ಮಳಿಗೆಗಳ ನಿರ್ಮಿಸಲಾಗುತ್ತಿದೆ’ ಎಂದರು.

ADVERTISEMENT

ಪ್ರಾಧಿಕಾರದ ಪ್ರಭಾರಿ ಕಾರ್ಯನಿರ್ವಾಹಕ ಅಧಿಕಾರಿ ರುದ್ರೇಶ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.