ಎಚ್.ಡಿ.ಕೋಟೆ: ತಾಲ್ಲೂಕಿನ ನೆಟ್ಟಕಲ್ಲಹುಂಡಿ ಗ್ರಾಮದಲ್ಲಿ ಗುರುವಾರ ಬೆಳಿಗ್ಗೆ ಕಾಡಾನೆಯೊಂದು ಮನೆ ಮೇಲೆ ದಾಳಿ ನಡೆಸಿದ್ದು, ವೃದ್ಧರೊಬ್ಬರು ಮೃತಪಟ್ಟಿದ್ದಾರೆ. ಅವರ ಪತ್ನಿ ಗಾಯಗೊಂಡಿದ್ದಾರೆ.
ಗ್ರಾಮದ ಚಿನ್ನಪ್ಪ (61) ದಾಳಿಯಿಂದ ಮೃತರಾದ ವ್ಯಕ್ತಿ. ಗಾಯಗೊಂಡಿರುವ ಕೊಟ್ಟೂರಮ್ಮ ಅವರನ್ನು ಎಚ್.ಡಿ.ಕೋಟೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆನೆ ದಾಳಿಯಿಂದ ಎರಡು ಮನೆಗಳಿಗೆ ಹಾನಿ ಆಗಿದೆ. ಬೀಚನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಶಾಸಕ ಅನಿಲ್ ಕುಮಾರ್ ಅವರು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಸ್ಥಳಕ್ಕೆ ಅರಣ್ಯ ಅಧಿಕಾರಿಗಳನ್ನು ಕರೆಸಿಕೊಂಡು, ಪರಿಹಾರ ನೀಡುವಂತೆ ಸೂಚನೆ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.