ADVERTISEMENT

ಜೂನ್ ಅಂತ್ಯಕ್ಕೆ ರಾಜ್ಯದಲ್ಲಿ ಒಂದು ಸಾವಿರ ಚಾರ್ಜಿಂಗ್ ಕೇಂದ್ರ: ಸುನಿಲ್ ಕುಮಾರ್

​ಪ್ರಜಾವಾಣಿ ವಾರ್ತೆ
Published 7 ಮೇ 2022, 8:34 IST
Last Updated 7 ಮೇ 2022, 8:34 IST
   

ಮೈಸೂರು: ಜೂನ್ ಅಂತ್ಯಕ್ಕೆ ವಿದ್ಯುತ್ ಚಾಲಿತ ವಾಹನಗಳ ಒಂದು ಸಾವಿರ ಚಾರ್ಜಿಂಗ್ ಕೇಂದ್ರಗಳನ್ನು ರಾಜ್ಯದಲ್ಲಿ ಸ್ಥಾಪಿಸಲಾಗುವುದು. ಇದಕ್ಕೆಂದೇ ವಿಶೇಷ ಅಭಿಯಾನ ಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ತಿಳಿಸಿದರು.

ತಾಲ್ಲೂಕಿನ ಕಡಕೊಳ ಗ್ರಾಮದಲ್ಲಿ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮವು ಶನಿವಾರ ಏರ್ಪಡಿಸಿದ್ದ ವಿದ್ಯುತ್ ಚಾಲಿತ ವಾಹನಗಳು ಮತ್ತು ಅದರ ಚಾರ್ಜಿಂಗ್ ತಂತ್ರಜ್ಞಾನಗಳ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.

ಎಲ್ಲಾ ಜಿಲ್ಲಾ ಕೇಂದ್ರಗಳು, ಪ್ರವಾಸಿತಾಣಗಳು, ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ಹಾಗೂ ಸರ್ಕಾರಿ ಕಚೇರಿಗಳಲ್ಲಿ ಚಾರ್ಜಿಂಗ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದರು.

ADVERTISEMENT

ಕೆಟ್ಟು ಹೋದ ವಿದ್ಯುತ್ ಪರಿವರ್ತಕಗಳನ್ನು ಕೇವಲ 24 ಗಂಟೆಗಳಲ್ಲೇ ಬದಲಾವಣೆ ಮಾಡುವ ಅಭಿಯಾನದಲ್ಲಿ ಶೇ 80ರಷ್ಟು ಪ್ರಗತಿ ಸಾಧಿಸಲಾಗಿದೆ. ಸೆಸ್ಕ್ ವ್ಯಾಪ್ತಿಯಲ್ಲೆ 8,087 ವಿದ್ಯುತ್ ಪರಿವರ್ತಕಗಳನ್ನು ಬದಲಿಸಲಾಗಿದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.