ADVERTISEMENT

ಮೈಸೂರು: ಉದ್ಯಾನ, ಆಟದ ಮೈದಾನಗಳಿಗೆ ಮುಕ್ತ ಪ್ರವೇಶ

​ಪ್ರಜಾವಾಣಿ ವಾರ್ತೆ
Published 7 ಸೆಪ್ಟೆಂಬರ್ 2020, 15:03 IST
Last Updated 7 ಸೆಪ್ಟೆಂಬರ್ 2020, 15:03 IST

ಮೈಸೂರು: ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಎಲ್ಲಾ ಉದ್ಯಾನಗಳಲ್ಲಿ ಸಾರ್ವಜನಿಕರ ಪ್ರವೇಶಕ್ಕೆ ಹೇರಲಾಗಿದ್ದ ನಿರ್ಬಂಧವನ್ನು ತೆರವುಗೊಳಿಸಲಾಗಿದೆ ಎಂದು ಪಾಲಿಕೆಯ ಆಯುಕ್ತ ಗುರುದತ್ ಹೆಗಡೆ ಆದೇಶ ಹೊರಡಿಸಿದ್ದಾರೆ.

ಕೋವಿಡ್-19 ಹರಡುವಿಕೆ ತಡೆಗಟ್ಟಲಿಕ್ಕಾಗಿ ಮುನ್ನೆಚ್ಚರಿಕೆ ಕ್ರಮವಾಗಿ ಉದ್ಯಾನಗಳಿಗೆ ಹಾಗೂ ಆಟದ ಮೈದಾನಗಳಿಗೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿತ್ತು. ಸಾರ್ವಜನಿಕರು ಹಾಗೂ ನಾಗರಿಕರ ವಾಯುವಿಹಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಈ ನಿರ್ಬಂಧ ತೆರವುಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಉದ್ಯಾನ ಹಾಗೂ ಆಟದ ಮೈದಾನಗಳಿಗೆ ಭೇಟಿ ನೀಡುವ ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಸ್ಯಾನಿಟೈಸರ್ ಉಪಯೋಗಿಸುವುದರ ಜೊತೆಗೆ ಪರಸ್ಪರ ಅಂತರ ಕಾಯ್ದುಕೊಳ್ಳುವಂತೆ ಪಾಲಿಕೆ ಆಯುಕ್ತರು ತಮ್ಮ ಆದೇಶದಲ್ಲಿ ಸೂಚಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.