ADVERTISEMENT

ಎಸಿಬಿ ಅಧಿಕಾರಿಗಳ ಕಾರ್ಯಾಚರಣೆ

​ಪ್ರಜಾವಾಣಿ ವಾರ್ತೆ
Published 16 ಡಿಸೆಂಬರ್ 2020, 1:55 IST
Last Updated 16 ಡಿಸೆಂಬರ್ 2020, 1:55 IST

ಮೈಸೂರು: ಇಲ್ಲಿನ ತಾಲ್ಲೂಕು ಕಚೇರಿಯಲ್ಲಿ ಖಾತೆ ಮಾಡಿಕೊಡಲು ವ್ಯಕ್ತಿಯೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ವರುಣಾ ಹೋಬಳಿಯ ಗ್ರಾಮ ಲೆಕ್ಕಿಗ ಸತೀಶ್‌ ಹಾಗೂ ರೆವಿನ್ಯೂ ಇನ್‌ಸ್ಪೆಕ್ಟರ್ ಅನಿಲ್‌ಕುಮಾರ್ ಅವರು ಭ್ರಷ್ಟಾಚಾರ ನಿಗ್ರಹ ದಳದ ಪೊಲೀಸರ ಕೈಗೆ ಮಂಗಳವಾರ ಸಿಕ್ಕಿಬಿದ್ದಿದ್ದಾರೆ.

ಇವರು ₹ 40 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಇದರಲ್ಲಿ ₹ 30 ಸಾವಿರ ಪಡೆಯುತ್ತಿದ್ದಾಗ ದಾಳಿ ನಡೆಸಲಾಯಿತು ಎಂದು ಪೊಲೀಸರು ತಿಳಿಸಿದ್ದಾರೆ. ಎಸ್.ಪಿ ಸುಮನ್ ಡಿ ಪನ್ನೇಕರ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಪರಶುರಾಮಪ್ಪ ಕಾರ್ಯಾಚರಣೆ ನಡೆಸಿದ್ದರು.

ಉಸಿರುಗಟ್ಟಿಸಿ ಯುವಕನ ಕೊಲೆ

ADVERTISEMENT

ಮೈಸೂರು: ಇಲ್ಲಿನ ಕುರಿಮಂಡಿ ನಿವಾಸಿ ರವಿ (27) ಅವರನ್ನು ದುಷ್ಕರ್ಮಿಗಳು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾರೆ.

ಚಾಮರಾಜನಗರದ ಗಣಿಗನಪುರದವರಾದ ಇವರು ಇಲ್ಲಿ ರೋಡ್‌ರೋಲರ್‌ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದು, ಬಾಡಿಗೆ ಮನೆಯಲ್ಲಿ ಒಬ್ಬರೇ ವಾಸವಿದ್ದರು. ಸೋಮವಾರ ರಾತ್ರಿ ಸ್ನೇಹಿತರೊಂದಿಗೆ ಇವರು ಮದ್ಯಸೇವಿಸಿದ್ದರು. ಆದರೆ, ಇವರ ಶವವು ಸೋಮವಾರ ಬೆಳಿಗ್ಗೆ ಮನೆಯಲ್ಲಿಯೇ ಪತ್ತೆಯಾಗಿದೆ. ಆರೋಪಿಗಳಿಗಾಗಿ ಶೋಧ ಕಾರ್ಯ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.‌

ಡಿಸಿಪಿ ಎ.ಎನ್.ಪ್ರಕಾಶ್‌ಗೌಡ, ಎಸಿಪಿ ಶಿವಶಂಕರ್, ಎನ್.ಆರ್‌.ಠಾಣೆ ಇನ್‌ಸ್ಪೆಕ್ಟರ್ ಅಜರುದ್ದೀನ್ ಸ್ಥಳಕ್ಕೆ ಭೇಟಿ ನೀಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.