
ಪ್ರಜಾವಾಣಿ ವಾರ್ತೆ
ಡಿಕೆಶಿ
ಮೈಸೂರು: ‘ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಾಲ್ಗುಣ ಸರಿ ಇಲ್ಲ ಎಂದು ವಿರೋಧ ಪಕ್ಷದವರು ಹೇಳುತ್ತಿದ್ದರು. ಅವರು ಬಂದರೆ ಮಳೆ ಬರುವುದಿಲ್ಲ ಎನ್ನುತ್ತಿದ್ದರು. ಈಗ ಏನಾಗಿದೆ ನೋಡಿ?’ ಎಂದು ಜಲಸಂಪನ್ಮೂಲ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕೇಳಿದರು.
ಇಲ್ಲಿ ಪತ್ರಕರ್ತರೊಂದಿಗೆ ಸೋಮವಾರ ಮಾತನಾಡಿ, ‘ರಾಜ್ಯದ ಎಲ್ಲಾ ಜಲಾಶಯಗಳೂ ಭರ್ತಿಯಾಗಿವೆ. ತಮಿಳುನಾಡಿಗೆ ಅಗತ್ಯಕ್ಕಿಂತಲೂ ಹೆಚ್ಚು ನೀರು ಹರಿದು ಹೋಗಿದೆ. ಎರಡೂ ರಾಜ್ಯದವರೂ ಸಂತೋಷವಾಗಿದ್ದಾರೆ. ಎರಡೂ ರಾಜ್ಯಗಳಲ್ಲಿ ಕೆರೆ– ಕಟ್ಟೆಗಳು ತುಂಬಿವೆ’ ಎಂದು ಹರ್ಷ ವ್ಯಕ್ತಪಡಿಸಿದರು.
‘ಮೇಕೆದಾಟು ಅಣೆಕಟ್ಟು ಕಟ್ಟಲು ನಾವು ಸಿದ್ದರಿದ್ದೇವೆ. ತಮಿಳುನಾಡಿನವರು ರಾಜಕೀಯ ಕಾರಣಕ್ಕೆ ವಿರೋಧ ಮಾಡುತ್ತಿದ್ದಾರೆ. ಕೇಂದ್ರದವರು ಮಧ್ಯಸ್ಥಿಕೆ ವಹಿಸಲಿ’ ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.