ADVERTISEMENT

ಪಿ.ಎಸ್.ಹಿರೇಮಠ ಅವರಿಗೆ ಹಾಲಭಾವಿ ಪ್ರಶಸ್ತಿ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 14:28 IST
Last Updated 18 ಸೆಪ್ಟೆಂಬರ್ 2019, 14:28 IST
ಪಿ.ಎಸ್.ಹಿರೇಮಠ
ಪಿ.ಎಸ್.ಹಿರೇಮಠ   

ಮೈಸೂರು: ಜೆಎಸ್ಎಸ್ ಮಹಾವಿದ್ಯಾಪೀಠ ಹಾಗೂ ಧಾರವಾಡದ ಬೆಲ್ಲದ ಶಿಕ್ಷಣ ಮತ್ತು ಕೃಷಿ ಪ್ರತಿಷ್ಠಾನದ ವತಿಯಿಂದ ನೀಡಲಾಗುವ 2019ನೇ ಸಾಲಿನ ಕಲಾಗುರು ಡಿ.ವಿ.ಹಾಲಭಾವಿ ಪ್ರಶಸ್ತಿಗೆ ಪಿ.ಎಸ್.ಹಿರೇಮಠ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಶಸ್ತಿಯು ₹ 10 ಸಾವಿರ ನಗದು ಪುರಸ್ಕಾರ, ಸ್ವಸ್ಥಿ ವಾಚನ ಮತ್ತು ಪ್ರಶಸ್ತಿ ಫಲಕಗಳನ್ನು ಒಳಗೊಂಡಿದೆ.

ಹಿರೇಮಠ ಅವರು ಜನಸಾಮಾನ್ಯರಲ್ಲಿ ಚಿತ್ರಕಲೆ ಅಭಿರುಚಿ ಬೆಳೆಸಲು ಹಲವು ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ನಡೆಸಿದ್ದಾರೆ. ಹುಬ್ಬಳ್ಳಿ ಕಲಾಮಂದಿರ ನಿರ್ಮಾಣದಲ್ಲಿ ಮುಂಚೂಣಿಯಲ್ಲಿ ನಿಂತು ಕೆಲಸ ಮಾಡಿದ್ದಾರೆ. ರಾಜ್ಯ ಚಿತ್ರಕಲಾ ಮಹಾವಿದ್ಯಾಲಯ ಸಿಬ್ಬಂದಿ ಸಂಘವನ್ನು ಸ್ಥಾಪಿಸಿ, ಅದರ ಅಧ್ಯಕ್ಷರಾಗಿ ಕಲಾ ಶಿಕ್ಷಕರಿಗೆ ಸಾಕಷ್ಟು ಸೌಕರ್ಯಗಳು ದೊರಕುವಂತಹ ಹೋರಾಟಗಳನ್ನು ನಡೆಸಿದ್ದಾರೆ. ಈ ಅಂಶಗಳನ್ನು ಗಣನೆಗೆ ತೆಗೆದುಕೊಂಡು ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಜೆಎಸ್ಎಸ್ ಮಹಾವಿದ್ಯಾಪೀಠದ ಸಾಮಾನ್ಯ ಶಿಕ್ಷಣ ವಿಭಾಗದ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT