ADVERTISEMENT

ಪಿಎಸ್‌ಎಸ್‌ಕೆ: 20ರಿಂದ ಕಬ್ಬು ಅರೆಯುವಿಕೆ: ಶಾಸಕ ಮುರುಗೇಶ ನಿರಾಣಿ

ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆ:

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 20:29 IST
Last Updated 10 ಆಗಸ್ಟ್ 2020, 20:29 IST
ಮುರುಗೇಶ ನಿರಾಣಿ
ಮುರುಗೇಶ ನಿರಾಣಿ   

ಮೈಸೂರು: ‘ಪಾಂಡವಪುರ ಸಹಕಾರ ಸಕ್ಕರೆ ಕಾರ್ಖಾನೆಯಲ್ಲಿ (ಪಿಎಸ್‌ಎಸ್‌ಕೆ) ಮಂಗಳವಾರ (ಆ.11) ನಾಡಿನ ವಿವಿಧ ಮಠಾಧೀಶರ ಸಮ್ಮುಖದಲ್ಲಿ ಪೂಜೆ ನೆರವೇರಿಸಲಾಗುವುದು. ಆ.20ರಿಂದ ಕಬ್ಬು ಅರೆಯುವಿಕೆ ಆರಂಭವಾಗಲಿದೆ’ ಎಂದು ಬಿಜೆಪಿ ಶಾಸಕ, ನಿರಾಣಿ ಸಕ್ಕರೆ ಕಾರ್ಖಾನೆ ಸಮೂಹದ ಅಧ್ಯಕ್ಷ ಮುರುಗೇಶ ನಿರಾಣಿ ಸೋಮವಾರ ಇಲ್ಲಿ ತಿಳಿಸಿದರು.

‘ರೈತರು, ಕಾರ್ಮಿಕರ ಹಿತದೃಷ್ಟಿಯಿಂದ ಕಾರ್ಖಾನೆಗೆ ಕಾಯಕಲ್ಪ ಕೊಡುವೆ. ಈ ಹಿಂದಿದ್ದ ಎಲ್ಲ ನೌಕರರನ್ನು ಮುಂದುವರಿಸಲಾಗುವುದು. ಹೊಸ ನೇಮಕಾತಿಯಲ್ಲಿ ಮೈಸೂರು, ಮಂಡ್ಯ ಭಾಗದವರಿಗೆ ಆದ್ಯತೆ ನೀಡಲಾಗುವುದು’ ಎಂದು ಸುದ್ದಿಗಾರರಿಗೆ ಪ್ರತಿಕ್ರಿಯಿಸಿದರು.

‘ಮೈಸೂರು ಜಿಲ್ಲೆಯ ಕೆ.ಆರ್.ನಗರದ ಶ್ರೀರಾಮ ಸಕ್ಕರೆ ಕಾರ್ಖಾನೆಯ ಗುತ್ತಿಗೆಯೂ ನಮಗೆ ಸಿಕ್ಕಿದೆ. ಮುಂದಿನ ವರ್ಷ ಕಬ್ಬು ಅರೆಯಲಿದ್ದೇವೆ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.