ಮನೋರಂಜನ್
ಮೈಸೂರು: ಸಂಸತ್ತಿನಲ್ಲಿ ಭದ್ರತಾ ಲೋಪ ಪ್ರಕರಣದ ಆರೋಪಿ ಡಿ.ಮನೋರಂಜನ್‌ಗೆ ಹಣ ವರ್ಗಾವಣೆ ಮಾಡಿದ್ದ ಸ್ನೇಹಿತ ಸೂರಪ್ಪ ಅವರ ವಿಚಾರಣೆ ನಡೆಸುತ್ತಿರುವ ದೆಹಲಿ ಪೊಲೀಸರಿಗೆ, ‘ಆತ ಯಾರೆಂಬುದೇ ಗೊತ್ತಿಲ್ಲ’ ಎಂದು ಆರೋಪಿಯ ಪೋಷಕರು ಹೇಳಿದ್ದರು!
‘ಹಣ ವರ್ಗಾವಣೆ ಹಾಗೂ ಮೊಬೈಲ್ ಸಂಭಾಷಣೆ ಬಗ್ಗೆ ಕೇಳಿದಾಗಷ್ಟೇ, ಆತನ ಪರಿಚಯವಿತ್ತೆಂದು ಒಪ್ಪಿಕೊಂಡಿದ್ದರು. ಸೂರಪ್ಪ ಮೂಲಕ ಮತ್ತೊಬ್ಬ ಸ್ನೇಹಿತನ ಬಗ್ಗೆಯೂ ಮಾಹಿತಿ ಪಡೆದು ವಿಚಾರಣೆಗೊಳಪಡಿಸಲಾಗಿದೆ’ ಎಂದು ಪೊಲೀಸರು ಹೇಳಿದ್ದಾರೆ. ಸೂರಪ್ಪ ಅವರನ್ನು ಪೊಲೀಸರು ಶುಕ್ರವಾರ ಸತತ 12 ಗಂಟೆ ಕಾಲ ವಿಚಾರಣೆಗೆ ಒಳಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.