ADVERTISEMENT

ಮೈಸೂರು |ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಪಿ.ಸಿ.ಕುಮಾರಸ್ವಾಮಿ ನೇಮಕ

​ಪ್ರಜಾವಾಣಿ ವಾರ್ತೆ
Published 5 ಜುಲೈ 2023, 6:37 IST
Last Updated 5 ಜುಲೈ 2023, 6:37 IST
ಡಾ.ಪಿ.ಸಿ.ಕುಮಾರಸ್ವಾಮಿ
ಡಾ.ಪಿ.ಸಿ.ಕುಮಾರಸ್ವಾಮಿ   

ಮೈಸೂರು: ನೂತನ ಜಿಲ್ಲಾ ಆರೋಗ್ಯಾಧಿಕಾರಿಯಾಗಿ (ಡಿಎಚ್‌ಒ) ಡಾ.ಪಿ.ಸಿ.ಕುಮಾರಸ್ವಾಮಿ ಅವರನ್ನು ನೇಮಕ ಮಾಡಿ ಸರ್ಕಾರವು ಸೋಮವಾರ ಆದೇಶ ಹೊರಡಿಸಿದೆ.

ಕುಮಾರಸ್ವಾಮಿ ಅವರು ಚಿತ್ರದುರ್ಗದ ಜಿಲ್ಲಾ ಸಂತಾನೋತ್ಪತ್ತಿ ಹಾಗೂ ಮಕ್ಕಳ ಆರೋಗ್ಯಾಧಿಕಾರಿಯಾಗಿದ್ದರು. ಅವರನ್ನು ಡಾ.ಕೆ.ಎಚ್‌.ಪ್ರಸಾದ್‌ ಅವರ ಸ್ಥಾನಕ್ಕೆ ನಿಯೋಜಿಸಲಾಗಿದೆ. ಪ್ರಸಾದ್‌ ಅವರು ಆರೋಗ್ಯ ಮತ್ತು ಕುಟಂಬ ಕಲ್ಯಾಣ ಇಲಾಖೆ ಆಯುಕ್ತರಲ್ಲಿ ಮುಂದಿನ ಸ್ಥಳದ ನಿಯುಕ್ತಿಗಾಗಿ ವರದಿ ಮಾಡಿಕೊಳ್ಳುವಂತೆ ಆದೇಶದಲ್ಲಿ ಹೇಳಿದೆ.

ಡಾ.ಕೆ.ಎಚ್‌.ಪ್ರಸಾದ್‌ ಅವರು 2021ರ ಜೂನ್‌ನಲ್ಲಿ ಕೋವಿಡ್‌ ಸಂದರ್ಭದಲ್ಲಿ ಮೈಸೂರು ಜಿಲ್ಲಾ ಆರೋಗ್ಯಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡಿದ್ದರು. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.