ADVERTISEMENT

ಪಾದಚಾರಿ ಸೇತುವೆ ಶೀಘ್ರದಲ್ಲೇ ನಿರ್ಮಾಣ: ಯದುವೀರ್

​ಪ್ರಜಾವಾಣಿ ವಾರ್ತೆ
Published 2 ಜೂನ್ 2025, 16:02 IST
Last Updated 2 ಜೂನ್ 2025, 16:02 IST
ಮೈಸೂರು ತಾಲ್ಲೂಕಿನ ಕೆ.ಆರ್‌. ಮಿಲ್‌ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ವೀಕ್ಷಿಸಿದರು
ಮೈಸೂರು ತಾಲ್ಲೂಕಿನ ಕೆ.ಆರ್‌. ಮಿಲ್‌ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸೋಮವಾರ ವೀಕ್ಷಿಸಿದರು   

ಮೈಸೂರು: ‘ಹೊರವಲಯದ ಬೆಂಗಳೂರು–ಮೈಸೂರು ರಾಷ್ಟ್ರೀಯ ಹೆದ್ದಾರಿಯ ಬಳಿ ನೂತನವಾಗಿ ಪಾದಚಾರಿ ಸೇತುವೆ ನಿರ್ಮಿಸಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಇದು ಪೂರ್ಣಗೊಳ್ಳಲಿದೆ’ ಎಂದು ಸಂಸದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌ ತಿಳಿಸಿದರು.

ಕೆ.ಆರ್‌.ಮಿಲ್‌ ಬಳಿ ನಡೆಯುತ್ತಿರುವ ಪಾದಚಾರಿ ಸೇತುವೆ ಕಾಮಗಾರಿಯನ್ನು ಸೋಮವಾರ ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.

‘ಇಲ್ಲಿನ ಜನರು ರಾಷ್ಟ್ರೀಯ ಹೆದ್ದಾರಿಯನ್ನು ದಾಟುವುದು ಕಷ್ಟವಾಗುತ್ತಿತ್ತು. ಈ ಬಗ್ಗೆ ಅವರು ಕುಂದುಕೊರತೆ ಹೇಳಿಕೊಂಡಾಗ ಕೂಡಲೇ ಇದನ್ನು ನಿರ್ಮಿಸುವ ಕುರಿತು ಕ್ರಮ ಕೈಗೊಳ್ಳಲಾಯಿತು. ಕಾಮಗಾರಿ ತ್ವರಿತವಾಗಿ ಸಾಗುತ್ತಿದ್ದು, ಬೇಗ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಹೇಳಿದರು.

ADVERTISEMENT

‘ಜನರಿಗೆ ಅನುಕೂಲವಾಗುವ ರೀತಿಯಲ್ಲಿ ಎಲ್ಲ ಕೆಲಸಗಳನ್ನೂ ಮಾಡಲಾಗುವುದು. ಅಭಿವೃದ್ಧಿಯ ಜೊತೆಗೆ ಜನೋಪಯೋಗಿ ಕೆಲಸಗಳಿಗೂ ಆದ್ಯತೆ ನೀಡಲಾಗುವುದು’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.