ADVERTISEMENT

ಅಂಧ ಮಕ್ಕಳ ಸಾಧನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2020, 16:37 IST
Last Updated 10 ಆಗಸ್ಟ್ 2020, 16:37 IST

ಮೈಸೂರು: ನಗರದ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆಯ ವಿದ್ಯಾರ್ಥಿಗಳು 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆಗೈದಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ ಏಳು ವಿದ್ಯಾರ್ಥಿಗಳಲ್ಲಿ ಆರು ವಿದ್ಯಾರ್ಥಿಗಳು ಪ್ರಥಮ ದರ್ಜೆ ಹಾಗೂ ಒಬ್ಬ ವಿದ್ಯಾರ್ಥಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.

ನಿಖಿಲ್ ಕುಮಾರ್ ಕೆ.ಸಿ., 537, ಪ್ರಜ್ವಲ್.ಕೆ., 529, ಮಹಮದ್ ಕೈಫ್ 503, ಕಾರ್ತಿಕ್ ಎಚ್.ಟಿ., 480, ಅಭಿಷೇಕ್ ಎಚ್.ಸಿ., 459, ಮಂಜಪ್ಪ ರಾಜನಹಳ್ಳಿ 399, ಧನುಷ್.ಎಸ್., 388 ಅಂಕ ಪಡೆದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.