
ಪ್ರಜಾವಾಣಿ ವಾರ್ತೆ
ಪಿರಿಯಾಪಟ್ಟಣ: ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ತಾಲ್ಲೂಕಿನ ನಂದಿಪುರ ಗ್ರಾಮದ ರಂಜಿತ್ (22) ಮೃತಪಟ್ಟಿದ್ದಾರೆ.
ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಕೊಣನೂರು ಸಮೀಪದ ಅರಸಿಕಟ್ಟೆ ದೇವಸ್ಥಾನಕ್ಕೆ ಗೆಳೆಯರೊಂದಿಗೆ ಕಾರಿನಲ್ಲಿ ರಂಜನ್ ಹೋಗಿದ್ದರು. ನಂದಿಪುರಕ್ಕೆ ವಾಪಸಾಗುತ್ತಿದ್ದಾಗ ಕಾರು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು, ವಿಭಜಕಕ್ಕೆ ಅಳವಡಿಸಿದ್ದ ಸರಳು ರಂಜನ್ ದೇಹಕ್ಕೆ ಹೊಕ್ಕಿದೆ.
ರಂಜನ್ ಇಬ್ಬರು ಗೆಳೆಯರೂ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.